ಹೊಸದಿಲ್ಲಿ: ಮೂರು ದಶಕಗಳ ಹಿಂದೆ ರಮಾನಂದ ಸಾಗರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ರಾಮಾಯಣವನ್ನು ದೂರದರ್ಶನದಲ್ಲಿ ಫೆಬ್ರವರಿ 5ರಿಂದ ಮತ್ತೆ ಪ್ರಸಾರ ಮಾಡಲಾಗುತ್ತಿದ್ದು, ಪ್ರತಿ ದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ಪ್ರಸಾರ ಮಾಡುವುದಾಗಿ ಹೇಳಿದೆ. ‘
‘ಧರ್ಮ, ಪ್ರೀತಿ ಮತ್ತು ಸಮರ್ಪಣಾ ಭಾವದ ಅನನ್ಯ ಸಾಹಸಗಾಥೆ ಮತ್ತೊಮ್ಮೆ ಇಡೀ ಭಾರತದ ಅತ್ಯಂತ ಜನಪ್ರಿಯ ಕಾರ್ಯಕ್ರಮ ರಾಮಾಯಣ ಬರಲಿದೆ,” ಎಂದು ಡಿಡಿ ನ್ಯಾಷನಲ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು,80 ಮತ್ತು 90 ರ ದಶಕದಲ್ಲಿ ಪ್ರಸಾರವಾಗಿದ್ದ ಈ ಧಾರಾವಾಹಿಯಲ್ಲಿ, ಶ್ರೀರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಖಾಲಿಯಾ ಮತ್ತು ಲಕ್ಷ್ಮಣನಾಗಿ ಸುನಿಲ್ ಲಹ್ರಿ ಕಾಣಿಸಿಕೊಂಡಿದ್ದರು.
ದೇಶದಾದ್ಯಂತ ಜನಮನ್ನಣೆ ಧಾರಾವಾಹಿ ಗಳಿಸಿತ್ತು. ಕೊರೊನಾ ಲಾಕ್‌ಡೌನ್ ವೇಳೆಯೂ ರಾಮಾಯಣ ಧಾರಾವಾಹಿಯನ್ನು ಪ್ರಸಾರ ಮಾಡಲಾಗಿತ್ತು. ಆಗಲೂ ಲಕ್ಷಾಂತರ ಜನರು ವೀಕ್ಷಿಸಿ ಜನಪ್ರಿಯತೆ ಪಡೆದಿತ್ತು ಎಂದು ಮಾಹಿತಿ ಕಂಡು ಬಂದಿದೆ.