This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಕರವೇದಿಂದ ನೈತಿಕ ಬೆಂಬಲ:ರಮೇಶ ಬದ್ನೂರ್

ಡಿ.೫ರಂದು ನಡೆಯುವ ಬಂದ್‌ಗೆ ಕರವೇ ನೈತಿಕ ಬೆಂಬಲ

ನಿಮ್ಮ ಸುದ್ದಿ ಬಾಗಲಕೋಟೆ

ಡಿಸೆಂಬರ್ 5 ರಂದು ನಡೆಯುವ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮರಾಠಾ ಅಭಿವೃದ್ಧಿ ನಿಗಮವನ್ನು ರದ್ದುಗೊಳಿಸಬೇಕೆಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲವನ್ನು ನೀಡಲಾಗುವುದು. ಆದರೆ ನಮ್ಮ ಹೋರಾಟ ಮರಾಠಿ ಭಾಷಿಗರ ವಿರುದ್ಧವೇ ಹೊರತು ಮರಾಠಾ ಸಮುದಾಯ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿರುವ ಅವರು ಮರಾಠಾ ಅಭಿವೃದ್ಧಿ ನಿಗಮದ ಬದಲಾಗಿ ಕ್ಷತ್ರೀಯ ಅಭಿವೃದ್ಧಿ ನಿಗಮ ಸ್ಥಾಪಿಸಲು ನಮ್ಮದೇನು ಅಭ್ಯಂತರವಿಲ್ಲ, ಆದರೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕನ್ನಡಿಗರ ಹಾಗೂ ಮರಾಠಿ ಭಾಷಿಗರ ನಡುವೆ ಇರುವ ತಗಾದೆಯನ್ನು ಬಲಪಡಿಸಲು ಮಾಡುವ ಹುನ್ನಾರ ನಡೆದಿದೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ (ಯತ್ನಾಳ), ಎಂ.ಪಿ.ರೇಣುಕಾಚಾರ್ಯ, ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಅವರು ಕನ್ನಡಪರ ಹೋರಾಟಗಾರರ ವಿರುದ್ಧ ನಾಲಿಗೆಯನ್ನು ಹರಿಬಿಟ್ಟು ಮಾತನಾಡಿರುವದನ್ನು ತೀವ್ರವಾಗಿ ಖಂಡಿಸಿರುವ ಅವರು, ನಾಳೆ ನಡೆಯುವ ಬಂದ್ ಸಂದರ್ಭದಲ್ಲಿ ಬಿಜೆಪಿ ಶಾಸಕರು ಕೆಲವೊಂದು ಪುಡಿ ರೌಡಿಗಳನ್ನು ಬಿಟ್ಟು ಶಾಂತತೆಗೆ ಭಂಗ ತರುವ ಹುನ್ನಾರವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಳೆ ನಡೆಯುವ ಬಂದ್ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಶಾಸಕ ಬಸವನಗೌಡ ಪಾಟೀಲ ಹಾಗೂ ಬಿಜೆಪಿ ಸರ್ಕಾರವೇ ಅವರೇ ನೇರ ಹೊಣೆಗಾರರು. ಕಾರಣ ಶಾಸಕ ಬಸನಗೌಡ ಪಾಟೀಲ ಅವರ ವಿರುದ್ಧ ಸರ್ಕಾರ ಎಚ್ಚೆತ್ತುಕೊಂಡು ಕಿರಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿರುವ ಅವರು ನಮ್ಮ ಹೋರಾಟ ಶಾಂತತೆಯಿಂದ ನಡೆಸುವುದಾಗಿ ಜಿಲ್ಲಾ ಕರವೇ ಅಧ್ಯಕ್ಷ ರಮೇಶ ಬದ್ನೂರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

";