This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsPolitics NewsState News

ರಾಮನಗರ ಜಿಲ್ಲೆಯನ್ನು ಬೆಂ.ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಚಿಂತನೆ: ಡಿಕೆಶಿ

ರಾಮನಗರ ಜಿಲ್ಲೆಯನ್ನು ಬೆಂ.ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಚಿಂತನೆ: ಡಿಕೆಶಿ

ಬೆಂಗಳೂರು : ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ (ಟ್ವಿಟ್ಟರ್) ನಲ್ಲಿ ಬರೆದುಕೊಂಡಿರುವ ಅವರು, “ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ಬಳಿಕ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು” ಎಂದಿದ್ದಾರೆ.

“ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡ” ಎಂದು ಹೇಳಿದ್ದಾರೆ.

ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ.

ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು…

“ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಕಳೆದ ಮಂಗಳವಾರ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, “ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ಹೆಸರಿಗಾಗಿ ರಾಮನಗರ ಜಿಲ್ಲೆ ಮಾಡಿದ್ದಾರೆ. ನಾವು ಅದನ್ನು ಪುನಃ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡ್ತೀವಿ” ಎಂದಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Nimma Suddi
";