This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಸಾಮಾಜಿಕ ಜಾಲತಾಣ ಮೂಲಕ ಜನಮನ ತಲುಪಿ

ಸಾಮಾಜಿಕ ಜಾಲತಾಣ ಮೂಲಕ ಜನಮನ ತಲುಪಿ

ಬಾಗಲಕೋಟ:

ರಾಜ್ಯ ಸರ್ಕಾರದ ಸಾಧನೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸಾಮಾಜಿಕ ಜಾಲತಾಣವನ್ನುಗರಿಷ್ಠ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರು ಎನ್ಎಸ್ಯುಐ ಮುಖಂಡರಿಗೆ ಸಲಹೆ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಎನ್ಎಸ್ಯುಐ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಯುವಶಕ್ತಿ ಹೆಚ್ಚು ತಂತ್ರಜ್ಞಾನ ಬಳಕೆ ಮಾಡುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅವರನ್ನು ತಲುಪಬೇಕು. ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಅನುಷ್ಟಾನದಿಂದ ಎಷ್ಟು ಪ್ರಯೋಜನವಾಗಿದೆ, ಎಷ್ಟು ಯುವಕರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂಬುದನ್ನು ಪ್ರಚಾರ ಮಾಡಬೇಕುಎಂದು ಹೇಳಿದರು.

ಸಂಸದರ ವಿವೇಚನಾ ನಿಧಿಯನ್ನು ಕ್ಷೇತ್ರದ ಸಂಸದರು ಬಳಕೆ ಮಾಡಿಕೊಳ್ಳದ ಕಾರಣ ಕೇಂದ್ರ ಸರ್ಕಾರಕ್ಕೆ ವಾಪಸ್ ಹೋಗಿದೆ. ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಯೋಜನೆಗಳಿಗೆ ಸಂಸದರ ವಿವೇಚನಾ ನಿಧಿ ಬಳಕೆ ಮಾಡಿಕೊಳ್ಳಲು ಸಾಧ್ಯವಿತ್ತು. ಆದರೆ ಸಕಾಲದಲ್ಲಿ ಬಳಕೆ ಮಾಡಿಕೊಳ್ಳಲಾಗದ ಕಾರಣ ದೊಡ್ಡ ಮೊತ್ತದ ಅನುದಾನ ವಾಪಸ್ ಹೋಗಿದೆ ಎಂದರು.

ಹಲವು ವರ್ಷಗಳಿಂದ ಬಾಗಲಕೋಟ ಕುಡಚಿ ರೈಲ್ವೆ ಯೋಜನೆ ನನೆಗುದಿಗೆ ಬಿದ್ದಿದೆ. ಈ ಯೋಜನೆ ಅನುಷ್ಠಾನಕ್ಕೆ ಬರಲು ಎಷ್ಟು ವರ್ಷಗಳು ಬೇಕು ಎಂದು ಪ್ರಶ್ನಿಸಿದ ಅವರು, ಇಂತಹ ಲೋಪಗಳು ಮತ್ತು ವೈಫಲ್ಯಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷೇತ್ರದ ಮತದಾರರಿಗೆ ತಲುಪಿಸುವ ಪ್ರಯತ್ನ ಮಾಡಿ ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಯಾವ ಕಾರಣಕ್ಕೆ ಅಧಿಕಾರಕ್ಕೆ ತರಬೇಕು ಎಂಬ ಅಂಶವನ್ನು ನಿಮ್ಮ ನಿಮ್ಮ ಕಾಲೇಜು ಸ್ನೇಹಿತರೊಂದಿಗೆ ಚರ್ಚೆ ಮಾಡಿ, ಗ್ರೂಪ್ಗಳಲ್ಲಿ ಹಂಚಿಕೊಳ್ಳಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಿಲ್ಲೆಗೆ ಏನೆನು ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಿದೆ ಎಂಬುದನ್ನು ವಿವರಿಸಿ ಎಂದು ಹೇಳಿದರು.

ಕೇಂದ್ರ ಸರ್ಕಾರದ ವೈಫಲ್ಯಗಳನ್ನು ತಿಳಿಸುವುದರೊಂದಿಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು, ಗ್ಯಾರಂಟಿಗಳನ್ನು ತಿಳಿಸಿ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಮಾದರಿಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಿ ಎಂದರು.

ಯುವ ಮುಖಂಡ ಸತ್ಯಜಿತ್ ಪಾಟೀಲ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳುವ ಮೂಲಕ ಯುವಶಕ್ತಿಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮೋದಿ ಅವರಿಗೆ ಬಂಡವಾಳಶಾಹಿಗಳ ದೊಡ್ಡಮೊತ್ತದ ಸಾಲ ಮನ್ನಾ ಮಾಡಲು ಸಾಧ್ಯವಿದೆ. ಆದರೆ ರೈತರ ಸಮಸ್ಯೆಗೆ ಸ್ಪಂದಿಸುವ ಮಾನವೀಯತೆ ಇಲ್ಲವಾಗಿದೆ. ಕೇಂದ್ರ ಸ್ಪಂದಿಸಿದ್ದರೂ ರಾಜ್ಯ ಸರ್ಕಾರ ರೈತರ ನೆರಿವಿಗೆ ಬಂದಿದೆ ಎಂದರು.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೂ ಮಾಡಿಲ್ಲ ಎನ್ನುವಂತೆ ಮೋದಿ ಮಾತನಾಡುತ್ತಿದ್ದಾರೆ. ಅವರು ಈಗ ಖಾಸಗೀಕರಣ ಮಾಡುತ್ತಿರುವ ಎಲ್ಲ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಯಾರು ಕಟ್ಟಿದ್ದರು ಎಂದು ಪ್ರಶ್ನಿಸಿದರು. ಆರೋಗ್ಯ ಕ್ಷೇತ್ರ, ಶಿಕ್ಷಣ ಕ್ಷೇತ್ರ,, ಕೃಷಿ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿನ ಸಾಧನೆಗಳು ಬಿಜೆಪಿ ನಾಯಕರಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ,ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ತಿಪ್ಪಾರೆಡ್ಡಿ ಸತ್ಯಜಿತ್ ಪಾಟೀಲ್ ಎನ್ಎಸ್ ಯುಐ ಪದಾಧಿಕಾರಿಗಳಾದ ಸಿದ್ಧಾರೂಢ ದನಗರ, ಸಚಿನ್ ಅಂಬಿ, ಶಂಭು ಪಡಸಾಲಿ, ಸೋಮು ಮೇಟಿ, ನಯನಕುಮಾರ್, ಮೆಹಬೂಬ್, ಮಂಜುನಾಥ ಕಣಬೂರಮಠ ಮತ್ತಿತರರು ಉಪಸ್ಥಿತರಿದ್ದರು.

";