This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Education NewsLocal NewsState News

ಹೆಸ್ಕಾಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹೆಸ್ಕಾಂನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (Hubli Electric Supply Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 248 ITI ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಉದ್ಯೋಗ ಹುಡುಕುತ್ತಿರುವ ಸ್ಥಳೀಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಸೆಪ್ಟೆಂಬರ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್(Online) ಅಥವಾ ಆಫ್​ಲೈನ್ (Offline) ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಹುಬ್ಬಳ್ಳಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ

ವಿದ್ಯಾರ್ಹತೆ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಕಡ್ಡಾಯವಾಗಿ ITI ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 26, 2023 ಕ್ಕೆ ಗರಿಷ್ಠ 25 ವರ್ಷ ಮೀರಿರಬಾರದು

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಎಕ್ಸಿಕ್ಯೂಟಿವ್ ಎಂಜಿನಿಯರ್
ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ (ITC)
ಹೆಸ್ಕಾಂ
ವಿದ್ಯುತ್ ನಗರ
ಕಾರವಾರ ರಸ್ತೆ
ಹುಬ್ಬಳ್ಳಿ- 24

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/08/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 10, 2023

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 50 ರೂ.
ಸಾಮಾನ್ಯ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಇಂಡಿಯನ್ ಪೋಸ್ಟಲ್ ಆರ್ಡರ್

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ

ವೇತನ:
ಮಾಸಿಕ ₹ 7,000

ಉದ್ಯೋಗದ ಸ್ಥಳ:
ಹುಬ್ಬಳ್ಳಿ

Nimma Suddi
";