ಬಾಗಲಕೋಟೆ
ಸರಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಡಿಸೆಂಬರ 26 ರಿಂದ ನೊಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗ ಅರ್ಹ ಅಭ್ಯರ್ಥಿಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪದವಿಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದರಿಗೆ 15 ನೂರು ರೂ.ಗಳ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಯುವನಿಧಿ ಯೋಜನೆ ಮೂಲಕ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವವರು 2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗ ಯುವಕ, ಯುವತಿಯರು ನೋಂದನಿ ಮಾಡಬಹುದಾಗಿದೆ.
ಸರಕಾರಿ ಖಾಸಗಿ, ಕ್ಷೇತ್ರದಲ್ಲಿ ಉದ್ಯೋಗ, ಸ್ವಯಂ ಉದ್ಯೋಗ ಮಾಡುತ್ತಿರುವ ಅಭ್ಯರ್ಥಿಗಳು, ಪದವಿ, ಡಿಪ್ಲೋಮಾ ಮುಗಿದ ನಂತರ ಮುಂದಿನ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಹರಿರುವದಿಲ್ಲ.
*ಅರ್ಜಿ ಸಲ್ಲಿಕೆ ವಿಧಾನ :*
——————–
ಅರ್ಹ ಅಭ್ಯರ್ಥಿಗಳು sevasindhugs.karnataka.gov.inಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಪದವಿ, ಡಿಪ್ಲೋಮಾ ತೇರ್ಗಡೆಯಾದ ಅಭ್ಯರ್ಥಿಗಳ ಶೈಕ್ಷಣಿಕ ಪ್ರಮಾಣ ಪತ್ರವನ್ನು ಎನ್.ಎ.ಡಿ ಪೋರ್ಟಲ್‍ನಲ್ಲಿ ಸಂಬಂಧಪಟ್ಟ ವಿಶ್ವ ವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು, ಮಂಡಳಿಗಳು ಇಂದೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಲು nad.karnataka.gov.in/#/Yuvanidhi ಜಾಲತಾಣದಲ್ಲಿ ಲಾಗಿನ್ ಆಗಬೇಕು. ತಮ್ಮ ಪದವಿ, ಡಿಪ್ಲೋಮಾ ಪ್ರಮಾಣ ಪತ್ರದಲ್ಲಿ ನೀಡಿರುವ ನೋಂದಣಿ ಸಂಖ್ಯೆಯನ್ನು ದಾಖಲಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂದು ಪೋರ್ಟಲ್‍ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆಯ ಪ್ರಯೋಜನೆಯನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಡಳಿತ ಭವನ ರೂ.ನಂ 135 ನವನಗರ, ಬಾಗಲಕೋಟೆ ದೂ.ಸಂ.08354-235337, 295210ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.