ಬಾಗಲಕೋಟೆ:
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರು ಏ. 19ರಂದು ಬೃಹತ್ ರ್ಯಾಲಿ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಈ ರ್ಯಾಲಿಯಲ್ಲಿ ಭಾಗವಹಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರು ಮನವಿ ಮಾಡಿದ್ದಾರೆ.
ಅಂದು ಬೆಳಗ್ಗೆ 10-30ಕ್ಕೆ ನಗರದ ಸಕ್ರಿ ಕಾಲೇಜು ಮೈದಾನದಿಂದ ಮೆರವಣಿಗೆ ಆರಂಭವಾಗಲಿದ್ದು, ರೈಲ್ವೆ ನಿಲ್ದಾಣ, ಶಕ್ತಿ ಟಾಕೀಸ್, ಬಸವೇಶ್ವರ ಸರ್ಕಲ್ , ಎಂ.ಜಿ. ರಸ್ತೆ, ಕಿಲ್ಲಾದ ಕೊತ್ತಲೇಶ್ವರ ದೇವಸ್ಥಾನ, ವೆಂಕಟಪೇಟೆಯ ವೆಂಕಟೇಶ್ವರ ದೇವಸ್ಥಾನ ಮಾರ್ಗವಾಗಿ ರ್ಯಾಲಿ ಅಂಬೇಡ್ಕರ್ ವೃತ್ತದಲ್ಲಿ ಸಮಾರೋಪಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಹಲವಾರು ಮುಖಂಡರು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
——–