ಬೆಳಗಾವಿ: ನಮ್ಮ ನಾಯಕರ ಅತಿಯಾದ ವಿಶ್ವಾಸವೇ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ತಲುಪದೇ ಇರಲು ಕಾರಣ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ. ಇದೇ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಸೋಲಿಗೆ ಕಾರಣ.
ನಾವು ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ, ಸೋಲಿಸಲು ಅಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ಮೃಣಾಲ್ಗೆ ಹಿನ್ನಡೆ ಆಗಿದೆ. ಲಿಂಗಾಯತ, ಮರಾಠ ಮತ ಸೆಳೆಯಲು ವಿಫಲವಾಗಿದ್ದರಿಂದ ಸೋಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸತೀಶ್ ಜಾರಕಿಹೊಳಿ ತಮ್ಮ ಮೇಲಿನ ಆರೋಪದ ಬಗ್ಗೆ ಸ್ಪಷ್ಟನೆ ನೀಡಿದರು.
ಬೆನ್ನಲ್ಲೇ ಇದೀಗ ಬೆಳಗಾವಿ ಲೋಕಸಭಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲು ನಾನು ಕಾರಣವಲ್ಲ. 5 ಲಕ್ಷ ಲಿಂಗಾಯತ ಮತದಾರರಿದ್ದಾರೆ. ಅವರು ನನ್ನ ಮಾತು ಕೇಳುತ್ತಾರಾ? ಮತದಾರರನ್ನು ಸೆಳೆಯುವಲ್ಲಿ ಸಚಿವೆ ಹೆಬ್ಬಾಳ್ಕರ್ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.