ಬಾಗಲಕೋಟೆ
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಶಂಕ್ರಪ್ಪ ಸಕ್ರಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಖಗೋಳ ವಿಜ್ಞಾನ ಕಾರ್ಯಕ್ರಮದಲ್ಲಿ ಶಂಕ್ರಪ್ಪ ಸಕ್ರಿ ಪ್ರೌಢಶಾಲೆಯ 55 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಾರಾಮಂಡಲ ವೀಕ್ಷಿಸಿದರು.
ಇತ್ತೀಚೆಗೆ ಹಮ್ಮಿಕೊಂಡ ತಾರಾ ಮಂಡಲ ವೀಕ್ಷಣೆಗೆ ತೋಟಗಾರಿಕೆ ವಿವಿಯ ಕುಲಸಚಿವ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಟಿ.ಬಿ.ಅಳ್ಳೊಳ್ಳಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮೂಢನಂಬಿಕೆಗಳನ್ನು ನಂಬದೆ ವಿಜ್ಞಾನದ ಕಡೆ ಹೆಚ್ಚಿನ ಒಲವನ್ನು ನೀಡಲು ಕರೆ ನೀಡಿದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದುಪಯೋಗವನ್ನು ಪಡೆದುಕೊಂಡು ವೈಜ್ಞಾನಿಕ ಮನೋಭಾವನೆ ಹೆಚ್ಚಿಸಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ತೋವಿವಿಯ ಪ್ರೊ.ಡಾ.ವಸಂತ ಗಾಣಿಗೇರ ಮಾತನಾಡಿ ಪ್ರಸ್ತುತ ಕಾಲಮಾಣದಲ್ಲಿ ಖಗೋಳ ವಿಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುತ,್ತ ವಿಜ್ಞಾನದ ಮೇಲೆ ಹೆಚ್ಚಿನ ಒಲವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವಿಜ್ಞಾನ ಶಿಕ್ಷಕ ವಿಜಯಕುಮಾರ ಕೆ. ಮಾತನಾಡಿ ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದಂತೆ ವಿವಿಧ ಆಕಾಶ ಕಾಯಗಳು, ನಕ್ಷತ್ರ ಪುಂಜಗಳು ಹಾಗೂ ಇನ್ನುಳಿದ ಖಗೋಳ ವಿಜ್ಞಾನದ ರಹಸ್ಯಕರ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸದರಿ ಕಾರ್ಯಕ್ರಮಕ್ಕಾಗಿ ತಮ್ಮ ಶಾಲೆಯನ್ನು ಆಯ್ಕೆಮಾಡಿಕೊಂಡಿದ್ದಕ್ಕಾಗಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಎಲ್ಲ ಸಿಬ್ಬಂದಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಭಾಗವಾಗಿ, ವಿದ್ಯಾರ್ಥಿಗಳಿಗೆ ದೂರದರ್ಶಕದ (ಖಿeಟesಛಿoಠಿe) ಮಾಹಿತಿ ಹಾಗೂ ಕೆಲ ನಕ್ಷತ್ರ ಪುಂಜಗಳ ಮಾಹಿತಿಯನ್ನು ತಿಳಿಸಲಾಯಿತು.
ಮುಂದುವರೆದು, ಕಾರ್ಯಕ್ರಮದಲ್ಲಿ ಶ್ರೀ ಗಂಗನಗೌಡ ಪಾಟೀಲ ಸಹಾಯಕರು, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಬಾಗಲಕೋಟೆ ಹಾಗೂ ಶಂಕ್ರಪ್ಪ ಸಕ್ರಿ ಪ್ರೌಢಶಾಲೆ (ಅನುದಾನಿತ), ಬಾಗಲಕೋಟೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಈರಣ್ಣ ಬುಳ್ಳಾ ನಿರೂಪಿಸಿದರು. ಆಸೀಫ ವಂದಿಸಿದರು.