This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ:ಸಚಿವೆ ಶೋಭಾ ಕರಂದ್ಲಾಜೆ

ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ:ಸಚಿವೆ ಶೋಭಾ ಕರಂದ್ಲಾಜೆ

ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದು ಬೆಳಕಿಗೆ ಬಂದಿದೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಿದ್ದರು ಎಂದು ಹೇಳಿದ್ದು, ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ.

ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ.ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದು, ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ.

ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ‌ಆಗಲಿದೆ. ಪಿತೂರಿ ಮಾಡಿದಾಗಲೇ ಹೈಕಮಾಂಡ್‌ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ,‌ ಅಭಿವೃದ್ಧಿ ಆಧಾರದ ಮೇಲೆ‌ ಮತ‌ ಕೇಳುತ್ತೇನೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷದಿಂದ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ ಎಂದಿದ್ದಾರೆ.

ಟಿಕೆಟ್ ಕೊಡುವ ಬಗ್ಗೆ ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎಂಬುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ ಎಂದು ವಿವರಿಸಿದರು.

Nimma Suddi
";