This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಸ್ವಾವಲಂಬಿ : ನಿಮ್ಮ ಜಮೀನಿನ ನಕಾಶೆ ನಿಮ್ಮ ಕೈಯಲ್ಲಿ

ನಿಮ್ಮ ಸುದ್ದಿ ಬಾಗಲಕೋಟೆ

ರೈತರು ತಮ್ಮ ಜಮೀನಿನ ನಕ್ಷೆಯನ್ನು ತಾವೇ ತಯಾರಿಸಿಕೊಳ್ಳಲು ಸ್ವಾವಲಂಬಿ ಆ್ಯಪ್ ಮೂಲಕ ಅವಕಾಶ ಕಲ್ಪಿಸಿದ್ದು, ಇದು ದೇಶದಲ್ಲಿಯೇ ಮೊದಲ ಬಾರಿ ಜಾರಿಗೆ ತಂದ ಮೊದಲ ರಾಜ್ಯವಾಗಿದೆ ಎಂದು ಭೂದಾಖಲೆಗಳ ಉಪನಿರ್ದೇಶಕ ಮಹಾಂತೇಶ ಮುಳಗುಂದ ತಿಳಿಸಿದ್ದಾರೆ.

ಮುಟೇನ್ ಪೂರ್ವ ನಕ್ಷೆ ಯೋಜನೆಯು ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾದಾಗಿನಿಂದ ಜನಸಾಮಾನ್ಯರಿಗೆ ತಮ್ಮ ಜಮೀನುಗಳ ಪೈಕಿ ಖರೀದಿ, ವಾಟ್ನಿ, ದಾನ ಪತ್ರ ಇತ್ಯಾದಿ ಹಕ್ಕು ಬದಲಾವಣೆ ವ್ಯವಹಾರಗಳಲ್ಲಿ ವ್ಯಾಜ್ಯ ರಹಿತ ಸೇವೆ ಸಲ್ಲಿಸುವಲ್ಲಿ ಭೂಮಾಪನ ಇಲಾಖೆಯ ಪಾತ್ರ ಪ್ರಮುಖವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ತಂತ್ರಜ್ಞಾನ ಬಳಸಿ ಸಾಕಷ್ಟು ಮಾರ್ಪಾಡುಗಳನ್ನು ಮಾಡಿ ಸಾರ್ವಜನಿಕರ ಸೇವೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಈ ತೊಂದರೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ವಾವಲಂಬಿ ಅಪ್ಲಿಕೇಷನ್ ರೂಪಿಸಲಾಗಿದೆ.

ಈ ಅಪ್ಲಿಕೇಶನ್ ಮೂಲಕ ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಕಛೇರಿಗಳನ್ನು ಅಲೆಯುವ ಜಂಜಾಟ ಇನ್ನು ಮುಂದೆ ತಪ್ಪಲಿದೆ. ಹೌದು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ಸ್ವಾವಲಂಬಿʻ ವೆಬ್‍ಸೈಟ್ ಆರಂಭಿಸಲಾಗಿದೆ. ಈ ವೆಬ್‍ಸೈಟ್ ಮೂಲಕವೇ ಭೂಮಿಯ ಮಾಲಿಕರು ಜಮೀನಿನ 11ಇ ನಕ್ಷೆ, ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು rdservices.karanata.gov.in ವೆಬ್‍ಸೈಟ್‍ಮೂಲಕ ಫೀ ಭರಣ ಮಾಡಿ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿದಾರರು ಕೋರಿರುವ ಹಿಸ್ಸೆಗೆ ಸಂಬಂಧಿಸಿದ ನಕ್ಷೆಯನ್ನು ಇಲಾಖೆ ಮುಖಾಂತರ ಅಪ್‍ಲೋಡ್ ಮಾಡಲಾಗುತ್ತದೆ. ಅರ್ಜಿದಾರರು ಸದರಿ ನಕ್ಷೆಯನ್ನು ಡೌನ್ ಲೋಡ್ ಮಾಡಿ, ಮಾರಾಟವಾಗಬೇಕಾದ ಭೂಮಿಯನ್ನು ನಿರ್ಧಿಷ್ಟ ಅಳತೆ ಗುರುತಿಸಿ ಮರು ಅಪ್ ಲೋಡ್ ಮಾಡಬೇಕು. ತದನಂತರ ಇಲಾಖೆಯು ಅದನ್ನು ಪರಿಶೀಲಿಸಿದ ಬಳಿಕ ಅನುಮೋದಿಸಿ ದೃಢೀಕರಿಸಿ ಮತ್ತೇ ಅಪ್‍ಲೋಡ್ ಮಾಡಲಾಗುತ್ತದೆ. ಸದರಿ ನಕ್ಷೆಯನ್ನು ಆನ್‍ಲೈನ್‍ನಲ್ಲಿ ಎಲ್ಲಿ ಬೇಕಾದರೂ ಪ್ರಿಂಟ್ ಪಡೆದು ಮಾರಾಟಕ್ಕೆ ನೊಂದಣಿ ಮಾಡಿಕೊಡಬಹುದು. ಈ ಪ್ರಕ್ರಿಯೆ ಮುಗಿದ ಬಳಿಕ ಪ್ರತ್ಯೇಕವಾಗಿ ಪಹಣಿಗಳು ಸೃಜಿಸಲಾಗುತ್ತದೆ.

ಈ ಮೊದಲು ನಾಡ ಕಛೇರಿಗೆ ಹೋಗಿ ಜಮೀನಿನ 11ಇ, ಪೋಡಿ ಕಾರ್ಯ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡ ಕಛೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತ್ತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಸೀಲಿಸಿ ನಕ್ಷೆ ಗುರುತಿಸಿ ಅಪ್‍ಲೋಡ್ ಮಾಡುತ್ತಿದ್ದರು. ಅಪ್‍ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗೆ ಕಳುಹಿಸಲಾಗುತ್ತಿತ್ತು. ಆದರೆ ಸ್ವಾವಲಂಬಿʻ ವೆಬ್‍ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು ಅತೀ ಕಡಿಮೆ ಅವಧಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ.
ಮೋಜಣಿ-ಕಾವೇರಿಗೆ ಲಿಂಕ್ ಸ್ವಾವಲಂಬಿʻ ವೆಬ್‍ಸೈಟ್ ಅನ್ನು ಭೂಮಾಪನ ಇಲಾಖೆಯ ಮೋಜಣಿʻ ಹಾಗೂ ಉಪನೋಂದಣಿ ಇಲಾಖೆಯ ಕಾವೇರಿʻ ತಂತ್ರಾಂಶಕ್ಕೆ ಲಿಂಕ್ ಮಾಡಲಾಗಿದೆ. ಈ ಮೂಲಕ ಸೇವೆ ಪಡೆಯಬೇಕೆಂದರೆ ಆರ್‍ಟಿಸಿ (ಪಹಣಿ) ಹಾಗೂ ನೋಂದಾಯಿತ ಮೊಬೈಲ್ ನಂಬರ್ ಇರುವ ಆಧಾರಕಾರ್ಡ್ ತಾಳೆಯಾದರೆ ಮಾತ್ರ ಈ ವೆಬ್‍ಸೈಟ್‍ನಲ್ಲಿ ಅರ್ಜಿಗಳು ಸ್ವೀಕೃತವಾಗುತ್ತವೆ. ಕಡ್ಡಾಯವಾಗಿ ಜಮೀನಿನ ಆರ್‍ಟಿಸಿ ನಂಬರ್ ಇದ್ದರೆ ಮಾತ್ರ ಅರ್ಜಿ ಮಾನ್ಯವಾಗುತ್ತದೆ. ಈ ಹೊಸ ಯೋಜನೆಯ ಲಾಭವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಭೂದಾಖಲೆಗಳ ಉಪ ನಿರ್ದೇಶಕರು ತಿಳಿಸಿದ್ದಾರೆ.

Nimma Suddi
";