This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics News

ಕಾಂಗ್ರೆಸ್​​ನ ಹಿರಿಯ ನಾಯಕ ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಗರಂ

ಕಾಂಗ್ರೆಸ್​​ನ ಹಿರಿಯ ನಾಯಕ ಶಾಮನೂರು ಹೇಳಿಕೆಗೆ ಡಿಕೆ ಶಿವಕುಮಾರ್ ಗರಂ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಗೆಲ್ಲಬೇಕು ಎಂದು ಕಾಂಗ್ರೆಸ್​​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಶಾಮನೂರು ಹೇಳಿಕೆಗೆ ತಿರುಗೇಟು ನೀಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಬಸವಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ನಂತರ ಶುಕ್ರವಾರ ಮಾತನಾಡಿದ್ದ ಶಾಮನೂರು ಶಿವಶಂಕರಪ್ಪ, ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ ಎಂದು ಸಂಸದ ರಾಘವೇಂದ್ರ ಅವರನ್ನು ಶ್ಲಾಘಿಸಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮ ಮಾಡಬೇಕು ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ನಿರ್ನಾಮ ಮಾಡಲು ಶೆಟ್ಟರ್ ಕರೆ ನೀಡಿದ್ದು, ಶೆಟ್ಟರ್ ಬಿಜೆಪಿ ನಿರ್ಮಾಮ ಮಾಡಿ ಎಂದು ಕರೆ ನೀಡಿದ್ದರು ಎಂದು ಡಿಕೆ ಶಿವಕುಮಾರ್ ಸೂಚಿಸಿದರು.

ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ, ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದು, ಮೋದಿ ಬೆಂಬಲಿಸಿ, ರಾಘವೇಂದ್ರ ಅವರಿಗೆ ಮತ ನೀಡಿ ಎಂದು ಶಾಮನೂರು ಹೇಳಿದ್ದಾರೆ. ಇದು ಏನು ಸಂದೇಶ ನೀಡುತ್ತದೆ ಎಂಬುದು ಗೊತ್ತಲ್ವಾ. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವಿವರಿಸಿದರು.

Nimma Suddi
";