ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ನಿತ್ಯ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದರ ಪರಿಣಾಮವಾಗಿ ಬಿಜೆಪಿ ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ. ಈಗ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ, ಹೈಕಮಾಂಡ ಜತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಎಂದು ಹೈಕಮಾಂಡ್ ಹೇಳಿದರೆ ಅವರನ್ನು ಕರೆದುಕೊಂಡು ಬರುತ್ತೇವೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ರಾಜು ಕಾಗೆ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಹೈಕಮಾಂಡ್ ನನಗೆ ಜವಾಬ್ದಾರಿ ನೀಡಿದರೆ ನಾನೇ ಯತ್ನಾಳರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ ಎಂದು ತಿಳಿಸಿದರು.
ನಮ್ಮ ಐದು ಗ್ಯಾರಂಟಿಗಳು ಜನರಿಗೆ ಉಪಯೋಗವಾಗುತ್ತಿವೆ. ಯಾರು ನಮ್ಮ ಗ್ಯಾರಂಟಿಗೆ ವಿರೋಧ ಮಾಡುತ್ತಿದ್ದಾರೋ ಇಂದು ಅವರೇ ನಮ್ಮನ್ನು ಫಾಲೋ ಮಾಡುತ್ತಿದ್ದಾರೆ. ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗುವುದಿಲ್ಲ. ಸರಕಾರ ನಡೆಸುವಾಗ ಅಡೆತಡೆಗಳು ಸಹಜ, ಆದರೆ ಸಿದ್ದರಾಮಯ್ಯ ಪಾರದರ್ಶಕವಾಗಿ ಸರಕಾರ ನಡೆಸುತ್ತಿದ್ದಾರೆ ಎಂದ ಅವರು, ಹನಿಟ್ರ್ಯಾಪ್ ಅವರ ವೈಯಕ್ತಿಕ ವಿಚಾರ ಎಂದು ಹೇಳಿದರು.