This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಆಂಬ್ಯುಲೆನ್ಸ್ ಡ್ರೈವರ್ ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಆಂಬ್ಯುಲೆನ್ಸ್ ಡ್ರೈವರ್ ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ಬೆಂಗಳೂರು,: ಆಂಬ್ಯುಲೆನ್ಸ್ ಡ್ರೈವರ್ ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ವಾದ ಘಟನೆ ನಿನ್ನೆ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್​ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಕಾರು ಡಿಕ್ಕಿಯಿಂದ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿದ್ದು, ಈ ವೇಳೆ ಟೆಂಕ್ಷನ್​ನಲ್ಲಿ ಬ್ರೇಕ್ ತುಳಿಯದೆ ಎಕ್ಸಲೇಟರ್ ತುಳಿದು ಮತ್ತೆ ಅವಾಂತರವಾಗಿದೆ. ಬಳಿಕ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂದು ಮಾಹಿತಿ ಕಂಡು ಬಂದಿದೆ.

";