This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

National NewsState News

ಹೈಕೋರ್ಟ್‌ ಆಕ್ರೋಶ: ಪೊಲೀಸ್ ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯಗಳ ಇತ್ಯರ್ಥ

ಹೈಕೋರ್ಟ್‌ ಆಕ್ರೋಶ: ಪೊಲೀಸ್ ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯಗಳ ಇತ್ಯರ್ಥ

ಬೆಂಗಳೂರು: ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಪುನರಾವರ್ತನೆಯಾಗುತ್ತಿರುವುದಕ್ಕೆ ಮತ್ತೊಮ್ಮೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಪೊಲೀಸ್ ಠಾಣೆಗಳನ್ನು ವ್ಯಾಪಾರ ಕೇಂದ್ರಗಳಾಗಿ ಮಾರ್ಪಡಿಸಲಾಗಿದೆ ಎಂದು ಕಟುವಾಗಿ ನುಡಿದಿದೆ.

ಪೊಲೀಸ್‌ ಠಾಣೆಯನ್ನು ವ್ಯಾಪಾರ ಕೇಂದ್ರ ಮಾಡಿಕೊಳ್ಳಲಾಗಿದೆಯೇ? ಠಾಣೆಯಲ್ಲಿ ಸಿವಿಲ್‌ ವ್ಯಾಜ್ಯ ತೀರ್ಮಾನಿಸಲು ಪೊಲೀಸರಿಗೆ ಅಧಿಕಾರ ನೀಡಿದವರು ಯಾರು? ಠಾಣೆಯಲ್ಲಿ ಕೂತು ವಸೂಲಿ ಮಾಡುವುದು ಪೊಲೀಸರ ಕೆಲಸವೇ? ಸಿವಿಲ್‌ ವ್ಯಾಜ್ಯವನ್ನು ಕ್ರಿಮಿನಲ್‌ ಪ್ರಕರಣವಾಗಿ ಮಾರ್ಪಡಿಸಲು ಹೇಗೆ ಸಾಧ್ಯ? ಎಂದು ವಿಚಾರಣೆ ವೇಳೆ ನ್ಯಾಯಮೂರ್ತಿ ಮೌಖಿಕವಾಗಿ ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಪೊಲೀಸ್‌ ತನಿಖಾಧಿಕಾರಿ ಹಲವು ರೀತಿಯಲ್ಲಿ ಕಾನೂನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದ ಅವರ ವಿರುದ್ಧ ಬೆಂಗಳೂರು ಪಶ್ವಿಮ ವಿಭಾಗದ ಉಪ ಪೊಲೀಸ್‌ ಆಯುಕ್ತರು (ಡಿಸಿಪಿ) ಕ್ರಮ ಕೈಗೊಂಡು ಒಂದು ತಿಂಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ತನಿಖಾಧಿಕಾರಿ ಕಾನೂನು ದುರ್ಬಳಕೆ ಮಾಡಿರುವ ಬಗ್ಗೆ ಅರ್ಜಿದಾರರು ತಮ್ಮ ಬಳಿಯಿರುವ ಎಲ್ಲ ದಾಖಲೆಗಳನ್ನು ಡಿಸಿಪಿಗೆ ಸಲ್ಲಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರದಲ್ಲಿ ಮಾರಾಟಗಾರರಿಗೆ ಹಣ ಪಾವತಿಸಲು ಖರೀದಿದಾರರನ್ನು ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪದ ಸಂಬಂಧ ಬೆಂಗಳೂರಿನ ಚಂದ್ರಾ ಲೇಔಟ್‌ ಠಾಣೆಯ ಪೊಲೀಸರ ವಿರುದ್ಧ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

";