ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಎಐಸಿಸಿ ಎರಡು ಹೊಸ ಗ್ಯಾರಂಟಿ ಘೋಷಣೆಯನ್ನು ಮಾಡಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಎರಡು ಗ್ಯಾರಂಟಿ ಘೋಷಣೆ ಮಾಡಿದರು ಎಂದು ಮಾಹಿತಿ ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, ಬೆಂಗಳೂರಿನಲ್ಲಿ ಕೆಲ ಘೋಷಣೆ ಮಾಡುವ ತೀರ್ಮಾನ ಮಾಡಿದ್ದೇವೆ. ಕಾರಣ ಇಂದು ಮಧ್ಯಾಹ್ನ ಎಲೆಕ್ಷನ್ ಕಮಿಷನ್ ಲೋಕಸಭೆ ಚುನಾವಣೆ ಘೋಷಣೆ ಮಾಡಲಿದ್ದು, ಬೆಂಗಳೂರಲ್ಲೇ ಘೋಷಣೆ ಮಾಡುತ್ತಿದ್ದೇವೆ ಎಂದರು.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಮುಂಬಯಿನಲ್ಲಿ ಅಂತ್ಯವಾಗುತ್ತಿದೆ. ಯುವ ನ್ಯಾಯ್, ಕಿಸಾನ್ ನ್ಯಾಯ್, ಮಹಿಳಾ ನ್ಯಾಯ್ ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಒಂದು ಶ್ರಮಿಕ್ ನ್ಯಾಯ್, ಹಿಸ್ಸೇದಾರ್ ನ್ಯಾಯ್ ಘೋಷಣೆ ಮಾಡ್ತಿದ್ದೇವೆ. ಹಿಂದುಳಿದ ವರ್ಗಗಳು, ಬಡವರಿಗೆ ಅನುಕೂಲ ಆಗುವಂತ ಘೋಷಣೆಗಳು ಇವಾಗಿದೆ ಎಂದರು.
ನಮ್ಮ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುತ್ತಿದ್ದು, ಕೇಂದ್ರ ಸರಿಯಾದ ಸಮಯಕ್ಕೆ ಅನುದಾನ ನೀಡಿದರೆ ಯೋಜನೆಗಳು ಸರಿಯಾದ ಸಮಯಕ್ಕೆ ಶುರುವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪಾಲು ಕೇಳಲು ಅನೇಕ ಪತ್ರ ಬರೆದಿದ್ದು, ಸಿಎಂ ಡಿಸಿಎಂ ಹೋಗಿ ಭೇಟಿ ಮಾಡಿ ಬಂದಿದ್ದಾರೆ. ಈ ನರೇಗಾ ಯೋಜನೆಗಳ ಬಗ್ಗೆ ಮೋದಿಗೆ ಆಸಕ್ತಿ ಇಲ್ಲ.ಇಂತಹ ಯೋಜನೆಗಳ ಬಗ್ಗೆ ಮೋದಿ ಸರ್ಕಾರ ನಿರ್ಲಕ್ಷ ವಹಿಸುತ್ತಿದೆ ಎಂದು ಹೇಳಿದರು.