ಬೆಂಗಳೂರು: ನಾವು ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇವೆ. ಸಂವಿಧಾನ ರಕ್ಷಣೆಯಾದರೆ ನಾವೆಲ್ಲ ಉಳಿಯುತ್ತೇವೆ. ಸಂವಿಧಾನಕ್ಕೆ ಧಕ್ಕೆಯಾದರೆ ನಾವು ಅಪಾಯಕ್ಕೆ ಸಿಲುಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರ್‌ನಲ್ಲಿ ನಡೆದ ಸಂವಿಧಾನ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಪೂರ್ವ ಪೀಠಿಕೆಯನ್ನ ಜನರು ತಿಳಿದುಕೊಳ್ಳಬೇಕು. ಸಂವಿಧಾನ ರಚನೆ ಆಗಿರುವುದು ದಲಿತರ ಉದ್ಧಾರಕ್ಕಾಗಿ. 1950 ರಿಂದ ಸಂವಿಧಾನ ಬಗ್ಗೆ ಅಪ್ರಪ್ರಚಾರ ಮಾಡಲಾಗುತ್ತಿದ್ದು, ಅಸಮಾಧಾನ ತೋಗಲಿಸಬೇಕು. ಇನ್ನೂ ಅಸಮಾನತೆಯ ಕಡಿಮೆ ಆಗಿಲ್ಲ. ಅಸಮಾನತೆ ತೆಗೆದುಹಾಕುವುದು ಸರ್ಕಾರಗಳ ಕರ್ತವ್ಯ ಎಂದು ಕಿವಿ ಮಾತು ಹೇಳಿದರು.
ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಮೂಲಕ ಜನರಿಗೆ ಸಂವಿಧಾನದ ಬಗ್ಗೆ ಜಾಗೃತಿ, ಮತ್ತು ಸಂವಿಧಾನದ ಅಗತ್ಯತೆ ಹಾಗೂ ಅನಿವಾರ್ಯತೆ ತಿಳಿಸುವ ಕೆಲಸ ಮಾಡಿದ್ದೇವೆ. ಇಂದು ಮತ್ತು ನಾಳೆ ಎರಡು ದಿನ ರಾಷ್ಟ್ರಿಯ ಏಕತಾ ದಿನ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶದಲ್ಲಿ ಅನೇಕ ವಿಚಾರ ತಿಳಿಸುವ ಕೆಲಸ ಆಗುತ್ತಿದೆ ಎಂದು ತಿಳಿಸಿದರು.ಈ ವರ್ಷ ಸಂವಿಧಾನ ಅಮೃತ ಮಹೋತ್ಸವ ಆಚರಣೆ ಮಾಡುತ್ತಿದ್ದೇವೆ ಎಂದು ಸೂಚಿಸಿದರು.