ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್ಡಿ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೇಳಿದ್ದರು
. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.
ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.