ಕಾರವಾರ: ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಾಗ್ದಾಳಿ ಮಾಡಿದರು.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳಿಗೆ, ಶಾಸಕರಿಗೆ ಕೊಡಲು ಹಣ ಇಲ್ಲ ಅಂತಾರೆ. ಹಿಂದುಳಿದವರು, ಎಸ್ಸಿ, ಎಸ್ಟಿ ವರ್ಗದವರಿಗೆ ನೀಡಿದ್ದ 11 ಸಾವಿರ ಕೋಟಿ ರೂ. ನಾಪತ್ತೆಯಾಗಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ, ಮೋದಿ ಸರ್ಕಾರ ದಿವಾಳಿಯಾಗಿಲ್ಲ ಎಂದು ಹೇಳಿದರು.
ರಾಜ್ಯ ಲೂಟಿ ಹೊಡೆದು, ದಿವಾಳಿ ಮಾಡಿ, ಮತ ಪಡೆಯಲು ಹೊರಟಿದ್ದಾರೆ. ಇಷ್ಟು ಹೇಸಿಗೆ, ದರಿದ್ರ ಸರ್ಕಾರ ನಾನೆಲ್ಲೂ ನೋಡಿಲ್ಲ. ನಮಗೆ ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಇಲ್ಲದ ವೇದನೆ ಇವರಿಗೆ ಏಕೆ?ಅವರಿಗೆ ಎಲ್ಲವೂ ಸರಿಹೋಗುತ್ತಿದೆ. ಸಿದ್ದರಾಮುಲ್ಲಾ ಖಾನ್‌ಗೆ ಏಕೆ ತೊಂದರೆ? ಸಿಎಂಗೆ ದುರಹಂಕಾರ, ಓಸಿ ಚೀಟಿ ಬರೆದಂತೆ ಫೈಲ್‌ನ್ನು ಬರೆಯುತ್ತಾರೆ.
ಓಸಿ ಚೀಟಿಗಾದರೂ ಬೆಲೆ ಇರುತ್ತೆ, 1 ರೂ. ಕೊಟ್ಟರೆ 80 ರೂ. ಕೊಡುತ್ತಾರೆ. ಸಿಎಂ ಲೆಟರ್‌ಗೆ ಎಷ್ಟು ದುರಂಕಾರದ ಸಹಿ ಹಾಕುತ್ತಾರೆ ಅಂದರೇ, ಆ ಲೆಟರ್ ಕೂಡಾ ನೋಡಬಾರದು ಅಂದೆನಿಸುತ್ತದೆ ಎಂದರು.
ರಾಜ್ಯ ಏನು ನಿಮ್ಮಪ್ಪನ ಆಸ್ತಿನಾ? ನಾವು ಕಟ್ಟಿರುವ ತೆರಿಗೆ ಹಣಕ್ಕೆ ಲೆಕ್ಕ ಕೊಡಿ. ದೇಶದಲ್ಲಿ ಶೇ.99.9 ರಷ್ಟು ಹಿಂದೂಗಳು ತೆರಿಗೆ ಕಟ್ಟುತ್ತಾರೆ. ನಮ್ಮ ಹಣ ತೆಗೆದುಕೊಂಡು ಹೋಗಿ ಮಸೀದಿ, ಚರ್ಚ್‌ಗೆ ಏಕೆ ನೀಡಿದ್ದೀರಿ? ನಮ್ಮ ತೆರಿಗೆ ಹಣ ನಮಗೆ ನೀಡಿ. ದೇವಸ್ಥಾನಗಳು ಹಾಳುಬಿದ್ದಿವೆ, ಇದಕ್ಕೆ ಹಣ ನೀಡಲು ಸರ್ಕಾರದಲ್ಲಿ ದುಡ್ಡಿಲ್ಲ. ಆದರೆ ಮಸೀದಿಗೆ ಕೊಡಲು ರಾಜ್ಯ ಸರ್ಕಾರದ ಬಳಿ ದುಡ್ಡಿದೆ ಎಂದು ಕಿಡಿಕಾರಿದರು.