ನಿಮ್ಮ ಸುದ್ದಿ ಮಸ್ಕಿ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಜೊತೆಗೂಡಿ ಸೋಮವಾರ ಮಸ್ಕಿ ವಿಧಾನಸಭೆ ಕ್ಷೇತ್ರದ ಉಮಲುಟಿ ಗ್ರಾಮದಲ್ಲಿ ರೋಡ್ ಶೋ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರ ಪರವಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಮತಪ್ರಚಾರ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ, ಶಾಸಕರಾದ ಬೈರತಿ ಸುರೇಶ್, ಅನಿಲ್ ಚಿಕ್ಕಮಾದು, ರಾಘವೇಂದ್ರ ಹಿಟ್ನಾಳ್, ಭೀಮಾನಾಯಕ್, ಅಮರೇಗೌಡ ಬಯ್ಯಾಪುರ, ಮಾಜಿ ಸಚಿವರಾದ ಹಂಪನಗೌಡ ಬಾದರ್ಲಿ, ಶಿವರಾಜ ತಂಗಡಗಿ ಸೇರಿದಂತೆ ಮತ್ತಿತರ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.