ಬಾಗಲಕೋಟೆ:
2023ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷವನ್ನಾಗಿ ಆಚರಿಸಲಾಗುತ್ತಿದ್ದು, ಈ ಪ್ರಯುಕ್ತ ಬೆಂಗಳೂರಿನಲ್ಲಿ ಜರಗುವ ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ 2024ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆ ನಡೆಸಲು ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗಾಗಿ ಡಿಸೆಂಬರ 13 ರಂದು ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕಸ್ಪರ್ದೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಎ.ಪಿ.ಎಂ.ಸಿ ಕ್ರಾಸ್, ಹೊಟೆಲ್ ಹರಿಪ್ರಿಯಾ ಎದುರುಗಡೆ, ನವನಗರ, ಬಾಗಲಕೋಟೆಯಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಗೆದ್ದ ಪ್ರಥಮ ವಿಜೇತರನ್ನು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಕಳುಹಿಸಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಈ ಕೆಳಗಿನ ಷರತ್ತುಗಳನ್ನು ಪಾಲಿಸಬೇಕು. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯ ಎಲ್ಲ ಸಾರ್ವಜನಿಕರು ಭಾಗವಹಿಸಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು, ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಭಾಗವಹಿಸಲು ಅವಕಾಶವಿರುವದಿಲ್ಲ. ಪ್ರತಿ ಸ್ಪರ್ಧೆಗೆ ಒಂದೇ ತಿನಿಸು (ಅಡುಗೆ) -ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಸಿರಿಧಾನ್ಯ ಸಸ್ಯಾಹಾರ ತಿನಿಸುಗಳಿಗೆ ಮಾತ್ರ ಅವಕಾಶವಿರುತ್ತದೆ.
ಮನೆಯಲ್ಲಿಯೇ ತಯಾರಿಸಿದ ಸಿರಿಧಾನ್ಯ ತಿನಿಸು ಪ್ರದರ್ಶಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಗ್ರಿಗಳೊಂದಿಗೆ ತಯಾರಿಸಲು ಸಿದ್ಧರಿರಬೇಕಾಗಿರುತ್ತದೆ ಅಲ್ಲದೇ ಸ್ಪರ್ಧೆಯ ದಿನದಂದು ಬೆಳಿಗ್ಗೆ 11 ಗಂಟೆಗೆ ಪ್ರದರ್ಶನಕ್ಕೆ ಇಡತಕ್ಕದ್ದು.
ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ತಯಾರಿಸಿದ ತಿನಿಸುಗಳ ಪ್ರದರ್ಶನ, ತಯಾರಿಕೆಗೆ ಬಳಸಿದ ಪದಾರ್ಥಗಳು, ತೋರಿಕೆ, ರುಚಿ, ಸುವಾಸನೆಗಳ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಜಿಲ್ಲಾ ಮಟ್ಟದಲ್ಲಿ ಒಂದು ಸಿಹಿ ಹಾಗೂ ಒಂದು ಖಾರದ ತಿನಿಸನ್ನು ಪ್ರಥಮ ಬಹುಮಾನಕ್ಕಾಗಿ ಆಯ್ಕೆ ಮಾಡಲಾಗುವುದು.
ಪ್ರಥಮ ಬಹುಮಾನ ಖಾರದ ತಿನಿಸು ಹಾಗೂ ಸಿಹಿ ತಿನಿಸಿಗೆ ತಲಾ 5 ಸಾವಿರ ರೂ.ಗಳ ಬಹುಮಾನಗಳನ್ನು ನೀಡಲಾಗುವುದು.
ರಾಜ್ಯ ಮಟ್ಟದ ಸ್ಪರ್ಧೆ ಡಿಸೆಂಬರ 23 ರಂದು ಬೆಂಗಳೂರಿನಲ್ಲಿ ಏರ್ಪಡಿಸಲಾಗುತ್ತಿದೆ. ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ವಿಜೇತರು ಬೆಂಗಳೂರಿನಲ್ಲಿ ಜರುಗುವ ಸಿರಿಧಾನ್ಯ ಪಾಕಸ್ಪರ್ಧೆಯಲ್ಲಿ ಸ್ವತಃ ತಿನಿಸನ್ನು ಅವಶ್ಯವಿರುವ ಸಾಮಗ್ರಿಗಳೊಂದಿಗೆ ತಯಾರಿಸಲು ಸಿದ್ಧರಿರಬೇಕಾಗಿರಬೇಕು.
ಭಾಗವಹಿಸಲು ಇಚ್ಚೆಪಡುವವರು ತಮ್ಮ ಹೆಸರನ್ನು ಡಿಸೆಂಬರ 8ರ ಸಂಜೆ 5 ಗಂಟೆಯೊಳಗಾಗಿ ತಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಧಾರ ಕಾರ್ಡನ ನಕಲು ಪ್ರತಿಯೊಂದಿಗೆ ನೋಂದಾಯಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಅಂಬೇಡ್ಕರ ಪರಿನಿರ್ವಾಣ ದಿನ ಆಚರಣೆ
ಬಾಗಲಕೋಟೆ: ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಣ ದಿನವನ್ನು ಡಿಸೆಂಬರ 6 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಗುತ್ತಿದೆ. ಆದ್ದರಿಂದ ಪರಿಶಿಷ್ಟ ಜಾತಿ, ಪಂಗಡದ ದುರೀಣರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ಸಮಾಜ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.