*ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ ಇಂದು*
ಬಾಗಲಕೋಟೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರಸಕ್ತ ಸಾಲಿಗೆ ಅಂತರರಾಷ್ಟ್ರೀಯ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿಕಲಚೇತನರಿಗಾಗಿ ಪುರುಷ, ಮಹಿಳೆ ಮತ್ತು ಮಕ್ಕಳಿಗಾಗಿ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ನವೆಂಬರ 28 ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತ ವಿಕಲಚೇತನರು ನವೆಂಬರ 28 ರಂದು ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳತಕ್ಕದ್ದು. ಭಾಗವಹಿಸಿದ ಕ್ರೀಡಾಪಟುಗಳಿಗೆ ಲಘು ಉಪಹಾರ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕ್ರೀಡಾ ಇಲಾಖೆಮ ಬಾಗಲಕೋಟೆ ದೂಸಂ.08354-235896, 9739722700, 9945284771 ಇವರನ್ನು ಸಂಪರ್ಕಿಸಬಹುದಾಗಿದೆ.
18 ರಿಂದ 45 ವರ್ಷದ ಪುರುಷರಿಗೆ ಕಬಡ್ಡಿ, 200 ಮೀಟರ್ ಸಿಂಗಲ್ ಸ್ಟಿಕ್ ಓಟ, 100 ಮೀಟರ ವ್ಹಿಲ್ ಚೇರ್ ಸ್ಪರ್ಧೆ (ಪುರುಷ/ಮಹಿಳೆ), 200 ಮೀಟರ್ ಓಟ (ವಾಕ್ & ಶ್ರವಣದೋಷವುಳ್ಳ ಪುರುಷರಿಗೆ), 6 ರಿಂದ 18 ವರ್ಷ ಬುದ್ದಿ ಮಾಂದ್ಯ ಮಕ್ಕಳಿಗೆ 100 ಮೀಟರ್ ಓಟ, ಗುಂಡು ಎಸೆತ, ಸಾಪ್ಟ ಬಾಲ್ ಎಸೆತ, ಲೆಮನ್ ಸ್ಪೂನ್ ಸ್ಪರ್ಧೆ ಹಾಗೂ ಸಾಮೂಹಿಕ ನೃತ್ಯ ಹಾಗೂ 200 ಮೀ ಓಟ ಮತ್ತು ಸಾಮೂಹಿಕ ನೃತ್ಯ (ವಾಕ್ & ಶ್ರವಣದೋಷವುಳ್ಳ ಮಕ್ಕಳಿಗೆ), ಗಾಯನ ಸ್ಪರ್ಧೆ ಹಾಗೂ ಸಾಮೂಹಿಕ ನೃತ್ಯ (ದೃಷ್ಠಿದೋಷವುಳ್ಳ ಮಕ್ಕಳಿಗೆ) ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ತಾತ್ಕಾಲಿಕ ಗುಮಾಸ್ತ, ಬೆರಳಚ್ಚುಗಾರರ ಹುದ್ದೆಗೆ ಅರ್ಜಿ*
ಬಾಗಲಕೋಟೆ: ತಾಲೂಕು ಕಾನೂನು ಸೇವಾ ಸಮಿತಿ, ಮುಧೋಳ ಮತ್ತು ಹುನಗುಂದದಲ್ಲಿ ಗುತ್ತಿಗೆ ಆಧಾರದ ಮೇಲೆ ಸಂಪೂರ್ಣ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಖಾಲಿ ಇರುವ ಗುಮಾಸ್ತ ಬೆರಳಚ್ಚುಗಾರ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಹಾಗೂ ನಿವೃತ್ತಿ ಹೊಂದಿದ ಸರಕಾರಿ ನೌಕರರು ತಮ್ಮ ಸ್ವ ವಿವರಗಳೊಂದಿಗೆ ದಾಖಲಾತಿಗಳ ದೃಡೀಕೃತ ನಕಲುಗಳನ್ನು ಲಗತ್ತಿಸಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟ ಇವರಿಗೆ ಡಿಸೆಂಬರ 5 ರೊಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಸದರಿ ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾತ್ರ ಇದ್ದು, ಕನಿಷ್ಟ ವೇತನ ಕಾಯ್ದೆಯ ಅಡಿಯಲ್ಲಿ ಮಾಸಿಕ ರೂ17,271/- ಸಂಭಾವನೆಯನ್ನು ಪಾವತಿಸಲಾಗುವುದು. ಅರ್ಜಿದಾರರು ಕನಿಷ್ಟ ಪದವಿ ಪಾಸಾಗಿರಬೇಕು. ಕಂಪ್ಯೂಟರ ಜ್ಞಾನ ಹೊಂದಿರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿವಿಧ ಮಹಿಳಾ ಯೋಜನೆಗಳಿಗೆ ಅರ್ಜಿ*
ಬಾಗಲಕೋಟೆ:: ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಡಿಸೆಂಬರ 22 ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿಕಲಚೇತನರ ಯೋಜನೆ : ಅರ್ಜಿ ಅವಧಿ ವಿಸ್ತರಣೆ
ಬಾಗಲಕೋಟೆ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಆಧಾರ ಯೋಜನೆ, ಮೇರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶು ಪಾಲನಾ ಭತ್ಯೆ ಯೋಜನೆಗಳನ್ನು ಸೇವಾ ಸಿಂಧುನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ 15 ವರಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಧಿಕಾರಿ ಸವಿತಾ ಕಾಳೆ ತಿಳಿಸಿದ್ದಾರೆ.
*ನಗರಸಭೆ : 29 ರಂದು ಆಯವ್ಯಯ ಮಂಡನೆ ಸಭೆ*
—————————————–
ಬಾಗಲಕೋಟೆ: ಬಾಗಲಕೋಟೆ ನಗರಸಭೆಯ 2024-25ನೇ ಸಾಲಿನ ಆಯ-ವ್ಯಯ ತಯಾರಿಸಲು ಆಡಳಿತಾಧೀಕಾರಿಗಳ ಅಧ್ಯಕ್ಷತೆಯಲ್ಲಿ ನವೆಂಬರ 29 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಭವನದಲ್ಲಿ ಪೂರ್ವಭಾವಿ ಸಾರ್ವಜನಿಕ ಸಭೆ ಕರೆಯಲಾಗಿದೆ. ನಗರದ ಅಭಿವೃದ್ಧಿ ಯೋಜನೆಗಳ ಕುರಿತು ನಗರದ ಗಣ್ಯವ್ಯಕ್ತಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ವರ್ತಕರು, ನಿವೃತ್ತ ನೌಕರರು, ಪತ್ರಕರ್ತರು ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಸಲºಗಳನ್ನು ನೀಡುವಂತೆ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.