ವಿಜಯಪುರ,
ಕರ್ನಾಟಕ ರಾಜ್ಯ 38ನೇ ರೇಡಿಯಾಲಾಜಿ- ಐಆರ್‌ಐಎ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 8 ರಿಂದ 10ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.
ಕಟಿಂಗ್ ಎಡ್ಜ್ ಆಂಡ್ ಅಡ್ವಾನ್ಸಸ್ ವಿಷಯದಡಿ ಈ ಬಾರಿ ಸಮ್ಮೇಳನ ನಡೆಯುತ್ತಿದ್ದು, ಡಿಸೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಮ್ಮೇಳನ ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡೂರಾವ ಮುಖ್ಯ ಅತಿಥಿಯಾಗಿ ಪಾಲ್ಗೋಳ್ಳಲಿದ್ದಾರೆ. ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಐ.ಆರ್.ಐಎ ರಾಷ್ಟ್ರೀಯ ಅಧ್ಯಕ್ಷ ಡಾ. ಉಮೇಶ ಕೃಷ್ಣಮೂರ್ತಿ, ರಾಜ್ಯಾಧ್ಯಕ್ಷ ಡಾ. ಪಿ. ಬಿ. ಶೆಟ್ಟಿ, ರಾಜ್ಯ ಕಾರ್ಯದರ್ಶಿ ಡಾ. ರವಿ, ಬಿ.ಎಲ್.ಡಿ.ಎ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಅಲೈಡ್ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮುಂತಾದವರು ಪಾಲ್ಗೋಳ್ಳಲಿದ್ದಾರೆ.
ದೇಶದ ನಾನಾ ಭಾಗಗಳಿಂದ ಸುಮಾರು 500ಕ್ಕೂ ಹೆಚ್ಚು ಪ್ರತಿನಿಧಿಗಳುಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಡಿಸೆಂಬರ್ 8 ರಂದು ಪೂರ್ವ ಸಮ್ಮೇಳನ(Pre Conference) ನಡೆಯಲಿದೆ. ಡಿಸೆಂಬರ್ 9 ಮತ್ತು 10 ರಂದು ರೇಡಿಯಾಲಜಿ ವಿಷಯಕ್ಕೆ ಸಂಬAಧಿಸಿದಂತೆ ನಾನಾ ಗೋಷ್ಠಿಗಳು ನಡೆಯಲಿವೆ. 50ಕ್ಕೂ ಹೆಚ್ಚು ತಜ್ಞವೈದ್ಯರು ಉಪನ್ಯಾಸ ನೀಡಲಿದ್ದಾರೆ.
ಅಲ್ಲದೇ, ಸುಮಾರು 30ಕ್ಕೂ ಹೆಚ್ಚು ರೆಡಿಯಾಲಜಿ ಕಂಪನಿಗಳು ತಾವು ಸಂಶೋಧಿಸಿರುವ ನೂತನ ತಂತ್ರಜ್ಞಾನಗಳು, ಸಂಶೋಧನೆಗಳನ್ನು ಈ ಸಂದರ್ಭದಲ್ಲಿ ಪ್ರಸ್ತುತ ಪಡಿಸಲಿದ್ದಾರೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ರೆಡಿಯೋಲಾಜಿ ವಿಭಾಗದ ಮುಖ್ಯಸ್ಥ ಮತ್ತು ಸಮ್ಮೇಳನ ಸಂಘಟನಾ ಅಧ್ಯಕ್ಷ ಡಾ. ರಾಜಶೇಖರ ಮುಚ್ಚಂಡಿ ತಿಳಿಸಿದ್ದಾರೆ.
ಈ ಸಮ್ಮೇಳನದ ಆಯೋಜನೆಯಿಂದ ಈ ಭಾಗದ ರಿಡಿಯಾಲಜಿ ವೈದ್ಯರು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಜ್ಞಾನ ವಿನಿಮಯಕ್ಕೂ ಹೆಚ್ಚಿಗೆ ಸಹಾಯವಾಗಲಿದೆ ಎಂದು ಸಮ್ಮೇಳನ ಸಂಘಟನಾ ಕಾರ್ಯದರ್ಶಿ ಡಾ. ಶಿವಾನಂದ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.