ವಿಜಯಪುರ,
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯು ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆಯಿತು.
ಈ ಪಂದ್ಯಾವಳಿಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ, ಸಹಾಯಕ ಕ್ರೀಡಾ ನಿರ್ದೇಶಕ ಕೈಲಾಸ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.
ಈ ಪಂದ್ಯಾವಳಿಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಡಿಯಲ್ಲಿ ಬರುವ ರಾಜ್ಯದ ವೈದ್ಯಕೀಯ, ದಂತ ಆಯುರ್ವೇದ, ಹೊಮಿಯೋಪತಿ, ಯುನಾನಿ, ಫಾರ್ಮಸಿ, ನರ್ಸಿಂಗ್ ಮುಂತಾದ ಆರೋಗ್ಯ ವಿಜ್ಞಾನ ವಿದ್ಯಾಲಯಗಳು ಸೇರಿದಂತೆ ಒಟ್ಟು 35ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.
ಪುರುಷರ ವಿಭಾಗದಲ್ಲಿ ಮೈಸೂರು ಮೆಡಿಕಲ್ ಕಾಲೇಜ್ ಹಾಗೂ ಸಂಶೋಧನಾ ಕೇಂದ್ರ, ಮೈಸೂರು ಪ್ರಥಮ ಸ್ಥಾನಗಳಿಸಿದರೆ, ಬಾಗಲಕೋಟೆಯ ಸಜ್ಜನ ಶ್ರೀ ನರ್ಸೀಂಗ್ ಕಾಲೇಜ್ ದ್ವಿತಿಯ ಸ್ಥಾನ ಗಳಿಸಿತು.
ಮಹಿಳೆಯರ ವಿಭಾಗದಲ್ಲಿ ಹಾಸನ ಸರಕಾರಿ ನರ್ಸಿಂಗ್ ಕಾಲೇಜು ಪ್ರಥಮ, ಬೆಂಗಳೂರಿನ ಶೀಮತಿ ನಾಗರತ್ನಮ್ಮ ನರ್ಸೀಂಗ್ ಕಾಲೇಜು ದ್ವಿತಿಯ ಸ್ಥಾನ ಗಳಿಸಿದೆ.
*ಆಯ್ಕೆ ಪ್ರಕ್ರಿಯೆ*
ಈ ಮಧ್ಯೆ ಮಂಗಳವಾರ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪುರುಷ ಮತ್ತು ಮಹಿಳೆಯರ ಖೋ ಖೋ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು.
*ಖೋಖೋ ಪಂದ್ಯಾವಳಿ:* ವಿಜಯಪುರ ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿ. ಎಲ್. ಡಿ. ಇ ಸಂಸ್ಥೆಯ ಕ್ರೀಡಾ ನಿರ್ದೇಶಕ ಎಸ್. ಎಸ್. ಕೋರಿ, ಸಹಾಯಕ ಕ್ರೀಡಾ ನಿರ್ದೇಶಕ ಕೈಲಾಸ ಹಿರೇಮಠ ಮುಂತಾದವರು ಉಪಸ್ಥಿತರಿದ್ದರು.