This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ನಿಮ್ಮ ಸುದ್ದಿ ಬಾಗಲಕೋಟೆ

ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಗಳು ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ವಿಡಿಯೋ ಕಾನ್ಪರೇನ್ಸ್ ಮೂಲಕ ಸೋಮವಾರ ನಡೆಸಲಾಯಿತು.

ಜಿಲ್ಲಾಡಳಿತ ಭವನದಲ್ಲಿರುವ ವಿಡಿಯೋ ಕಾನ್ಪರೇನ್ಸ್ ಹಾಲ್‍ನಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ) ಮತ್ತು ಭಿತ್ತಿ ಪತ್ರ, ಕೋಲಾಜ್ ಮೇಕಿಂಗ್ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ರಾಜ್ಯ ಮಟ್ಟದ ಸ್ಪರ್ಧೆಗಳು ರಾಜ್ಯಾದ್ಯಂತ ವಿಡಿಯೋ ಕಾನ್ಪರೇನ್ಸ್ ಮೂಲಕ ಏಕಕಾಲದಲ್ಲಿ ನಡೆಸಲಾಯಿತು.

ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಯುವ ಮತದಾರರನ್ನು ಮತದಾರ ಪಟ್ಟಿಗೆ ನೊಂದಣಿ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಸ್ಪರ್ಧಾ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಚುನಾವಣೆಗಳಲ್ಲಿ ಸಾಮಾಜಿಕ ಜಾಲತಾಣದ ಪಾತ್ರ, ಪದವಿ ಪೂರ್ವ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಭಾರತದ ಅಭಿವೃದ್ದಿಯಲ್ಲಿ ಚುನಾವಣೆಗಳ ಪ್ರಾಮುಖ್ಯತೆ, ಪದವಿ, ತಾಂತ್ರಿಕ, ವೈದ್ಯಕೀಯ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಮತ್ತು ನಿರಂಕುಶ ಪ್ರಭುತ್ವ ಹಾಗೂ ಕಲೆ ಚಿತ್ರಕಲೆ ವಿದ್ಯಾರ್ಥಿಗಳಿಗೆ ಭಾರತ ಮತ್ತು ಅಮೇರಿಕಾ ಚುನಾವಣೆಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಣಾಮಗಳು ಕುರಿತು ಕನ್ನಡ ಮತ್ತು ಇಂಗ್ಲೀಷ ಮಾದ್ಯಮದಲ್ಲಿ ಸ್ಪರ್ಧೆ ನಡೆಸಲಾಯಿತು.

ರಾಜ್ಯಮಟ್ಟದ ಭಿತ್ತು ಚಿತ್ರ ಮತ್ತು ಕೊಲಾಜ್ ಮೇಕಿಂಗ್ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಭಾರತದ ಚುನಾವಣೆಗಳಲ್ಲಿ ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಸ್ಪರ್ಧೆ ನಡೆಸಲಾಯಿತು.

ಬಾಗಲಕೋಟೆಯಿಂದ ಒಟ್ಟು 7 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.
ಸ್ಪರ್ಧಾ ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ, ವಿಷಯ ಪರಿವೀಕ್ಷರಾದ ಜಾಸ್ಮಿನ್ ಕಿಲ್ಲೆದಾರ, ಯಾವಗಲ್ಲ, ಎನ್.ವಾಯ್.ನಾಡನಗೇರಿ, ಡಯಟ್ ಕಾಲೇಜಿನ ಉಪನ್ಯಾಸಕ ಎಸ್.ಎಸ್.ಹಡಗಲಿ, ಪಿಯು ಕಾಲೇಜಿನ ನೋಡಲ್ ಅಧಿಕಾರಿ ಎಂ.ಕೆ.ಮಂಡಾಗಣಿ ಸೇರಿದಂತೆ ಇತರರು ನಡೆಸಿಕೊಟ್ಟರು. ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳಾದ ಪ್ರತಿಭಾ, ಪೂರ್ಣಿ, ಆಕಾಶ, ಅನುಷಾ, ಭೂಮಿಕಾ, ಆಶಾ ಹಾಗೂ ಸುಹಾಸಿನಿ ಭಾಗವಹಿಸಿದ್ದರು.