ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಅಥವಾ kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕವೂ ಪರಿಶೀಲಿಸಬಹುದು.
ಇಂದು ಬೆಳಗ್ಗೆ 10.30ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟ
ಇಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಮಾಹಿತಿ ತಿಲಿದು ಬಂದಿದೆ.
8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು
ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.
ಎಸ್ಎಸ್ಎಲ್ಸಿ ಫಲಿತಾಂಶ, ಆನ್ಲೈನ್ನಲ್ಲಿ ನೋಡುವುದು ಹೇಗೆ?:
ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ ಹೊಸ ಲಾಗಿನ್ ಪುಟವು ತೆರೆಯುತ್ತದೆ ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ