ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠರಿಂದ ನಾಮಪತ್ರ ಸಲ್ಲಿಕೆ
ಬಾಗಲಕೋಟೆ:
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ಡಾ.ವೀರಣ್ಣ ಸಿ. ಚರಂತಿಮಠ ಅವರು, ಬುಧವಾರ ವಿಧಾನಸಭೆ ಚುನಾವಣೆಯ ಬಾಗಲಕೋಟೆ ಮತಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ಗೋಮಾತೆಗೆ ವಿಶೇಷವಾದ ಪೂಜೆಯನ್ನು ಸಲ್ಲಿಸಿದರು. ನಂತರ ಅವರು ಚುನಾವಣಾ ಅಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಚುನಾವಣಾಧಿಕಾರಿ ಶ್ವೇತಾ ಬೀಡಿಕರ್ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು. ಪತ್ನಿ ಶ್ರೀಮತಿ ರಾಜೇಶ್ವರಿ ವೀರಣ್ಣ ಚರಂತಿಮಠ, ಜಿ.ಎಸ್. ಪಾಟೀಲ, ಡಾ.ಎಮ್.ಎ. ತೇಲಸಂಗ್, ರಾಜು ಎಂ. ಪಾಟೀಲ ಅವರು ಡಾ.ವೀರಣ್ಣ ಚರಂತಿಮಠ ಅವರಿಗೆ ಸಾಥ್ ನೀಡಿದರು.
ಈ ಸಂದರ್ಭದಲ್ಲಿ ಡಾ.ನವೀನ್ ಚರಂತಿಮಠ, ಜಯಂತ ಕುರಂದವಾಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಕಪ್ಪಯ್ಯ ಮುತ್ತಿನಮಠ, ಮಹೇಶ ಅಥಣಿ, ಗುರುಬಸವ ಸೂಳಿಭಾವಿ, ಮಹಾಂತೇಶ ಶೆಟ್ಟರ, ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಸುರೇಶ ಕೊಣ್ಣೂರ ಸೇರಿದಂತೆ ಅನೇಕರು ಇದ್ದರು.
ಬಾಗಲಕೋಟೆ ಮತಕ್ಷೇತ್ರದ ಜನತೆ, ಪಕ್ಷದ ಹಿರಿಯರು, ಕಾರ್ಯಕರ್ತರು, ಹಿತೈಷಿಗಳೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ದಿ.೨೦ ರಂದು ಬೆಳಿಗ್ಗೆ ೯.೩೦ಕ್ಕೆ ನಾಮಪತ್ರವನ್ನು ಸಲ್ಲಿಸಲಾಗುವುದು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು
*ಡಾ. ವೀರಣ್ಣ ಸಿ. ಚರಂತಿಮಠ, ಬಿಜೆಪಿ ಅಭ್ಯರ್ಥಿ*