ಬೆಂಗಳೂರು: ಈಗ ಎಲ್ಲರ ದೃಷ್ಟಿ ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ನೆಟ್ಟಿದೆ. ಈಗಾಗಲೇ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲೇ ಸ್ಪರ್ಧೆ ಮಾಡುವುದಾಗಿ ಹೇಳಿದ್ದು, ಬಿಜೆಪಿಯಿಂದ ಟಿಕೆಟ್ ಬಯಸಿದ್ದಾರೆ. ಅವರು ಒತ್ತಡದ ರಾಜಕೀಯಕ್ಕೂ ಮುಂದಾಗಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಿ ತಾವು ಮಂಡ್ಯದ ಪ್ರಬಲ ಆಕಾಂಕ್ಷಿ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ. ಆದರೆ, ಬಿಜೆಪಿ – ಜೆಡಿಎಸ್ ಮೈತ್ರಿ ಇರುವುದರಿಂದ ಈ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ.
ಎಲ್ಲ ಗೊಂದಲಕ್ಕೆ ಕಾರಣವಾಗಿದ್ದು, ಈ ನಡುವೆ ನವ ದೆಹಲಿ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಮಾತನಾಡಿ, ಗೃಹ ಸಚಿವರಾದ ಅಮಿತ್ ಶಾಅವರು ನಾಳೆ (ಫೆ. 10) ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲವೂ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.