ಬಾಗಲಕೋಟೆ
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಬಿಸಿಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿದ್ದು ಜನತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಕಾರದ ಅಧ್ಯಕ್ಷೆ ಕೆ.ಎಂ.ಜಾನಕಿ ತಿಳಿಸಿದ್ದಾರೆ.
ಬಿಸಿಗಾಳಿ ಹಿನ್ನೆಲೆಯಲ್ಲಿ ಜನರು ಮಧ್ಯಾಹ್ನ 12 ರಿಂದ 3 ಗಂಟೆಯ ಅವಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು ಕುಡಿಯುವುದರೊಂದಿಗೆ ಹಗುರವಾದ ಹತ್ತಿಬಟ್ಟೆ ಧರಿಸುವುದು, ಟೋಪಿ, ಛತ್ರಿ, ಕನ್ನಡಕ ಬಳಸಿ ಮತ್ತು ಶ್ರಮದಾಯಕ ಚಟುವಟಿಕೆಗಳಿಂದ ದೂರವಿರಬೇಕು.
ನಿಲ್ಲಿಸಿದ ವಾಹನದಲ್ಲಿ ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ಬಿಡಬೇಡಿ. ಮೂರ್ಛೆ ಅಥವಾ ಅನಾರೋಗ್ಯ ಕಾಣಿಸಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಓಆರ್‌ಎಸ್, ಮನೆಯಲ್ಲಿ ತಂಪಾಗಿರಿಸಿದ ಲಸ್ಸಿ, ಮಜ್ಜಿಗೆ, ನಿಂಬೆ ನೀರು ಸೇರಿದಂತೆ ತಂಪು ಪಾನೀಯ ಹೆಚ್ಚಾಗಿ ಸೇವಿಸಬೇಕು.
ಪ್ರಾಣಿಗಳಿಗೆ ನೆರಳು ಮತ್ತು ನೀರು ಒದಗಿಸಿ, ಅವುಗಳಿಗೆ ಸಾಕಷ್ಟು ನೀರು ಕುಡಿಯಲು ನೀಡಬೇಕು. ನಿಮ್ಮ ಮನೆಯನ್ನು ತಂಪಾಗಿ ಇರಿಸಿ. ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಬೇಕು. ಬಿಸಿಗಾಳಿಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಕಂಡುಬAದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ದೂ.08354-236240ಗೆ ಸಂಪರ್ಕಿಸುವಂತೆ ಜಿಲ್ಲಾಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.