*ಸಂವಿಧಾನ ದಿನ ಆಚರಣೆ | ಅಂಬೇಡ್ಕರ
ಬಾಗಲಕೋಟೆ
ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ದಿನಾಚರಣೆ ಅಂಗವಾಗಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.