This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ತೆಲಂಗಾಣದಲ್ಲಿ ಭೀಕರ ಅಪಘಾತ: ಬಸ್​ ಹಾಗೂ ಲಾರಿ ನಡುವೆ ಡಿಕ್ಕಿ, ಆರು ಮಂದಿ ಸಾವು

ತೆಲಂಗಾಣದಲ್ಲಿ ಭೀಕರ ಅಪಘಾತ: ಬಸ್​ ಹಾಗೂ ಲಾರಿ ನಡುವೆ ಡಿಕ್ಕಿ, ಆರು ಮಂದಿ ಸಾವು

ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿರುವ ಘಟನೆ ಚಿಲ್ಕಲೂರಿಪೇಟೆಯಲ್ಲಿ ಬುಧವಾರ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮೃತರನ್ನು ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯ ನಿವಾಸಿಗಳಾದ ಅಂಜಿ (35), ಉಪ್ಪಗುಂದೂರು ಕಾಶಿ (65), ಉಪ್ಪುಗುಂದೂರು ಲಕ್ಷ್ಮಿ (55), ಮತ್ತು ಮುಪ್ಪರಾಜು ಖ್ಯಾತಿ ಸಾಯಿಶ್ರೀ (8) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಡಿಕ್ಕಿಯ ನಂತರ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರಿಗೆ ರವಾನಿಸಲಾಗಿದೆ.

ಗಾಯಾಳುಗಳಿಗೆ ಚಿಲಕಲೂರಿಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಆರೋಗ್ಯ ಚಿಕಿತ್ಸೆಗಾಗಿ ಗುಂಟೂರಿಗೆ ಶಿಫಾರಸು ಮಾಡಲಾಗಿದೆ.

 

";