ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ.
ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.