ಬೆಂಗಳೂರು
ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ.
ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದುಬಿಡ್ತೀವಿ.
ಬಂದಮೇಲೆ ಎಲ್ಲಾ ಕೇಸ್ ಗಳನ್ನ ಮುಚ್ಚಿಹಾಕಬಹುದು ಅಂತಾ ಐದಾರು ತಿಂಗಳು ಮುಂದೂಡ್ತಿದ್ದಾರೆ.
ಇದೆಲ್ಲಾ ತಂತ್ರಗಾರಿಕೆ ಅಷ್ಟೇ.
ಅದು ಮುಂದೆ ಏನೇನಾಗುತ್ತೋ ನೋಡೊಣ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ.
ನಾನು ವಕೀಲನಾಗಿರುವುದಕ್ಕೆ ಕೇಸ್ ವಾಪಸ್ಸ್ ತೆಗೆದುಕೊಂಡಿದ್ದು ಎಂಬ ಸಿಎಂ ಸಿದ್ದು ಹೇಳಿಕೆ ವಿಚಾರ.
ಸಿದ್ದರಾಮಯ್ಯಗೆ ಹೆಚ್ಡಿಕೆ ತಿರುಗೇಟು.
ಅವರು ದೊಡ್ಡ ವಕೀಲರು ಅಂತ ಗೊತ್ತು ನನಗೆ.
ಇವರೊಬ್ಬರೇ ಕಾನೂನು ತಿಳಿದುಕೊಂಡಿದ್ದಾರಲ್ವಾ.
ಅದಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ತೆಗೆದು ರಿಡೋ ಮಾಡಿದ್ರಿ.
ಕೆಂಪಣ್ಣನ ಆಯೋಗ ಮಾಡಿ ಉಳಿದುಕೊಂಡ್ರಲ್ಲ.
ಆ ರೀತಿಯ ವಕೀಲರು ಇವರು.
ಜನಸಾಮಾನ್ಯರಿಗೆ ಒಂದು ನ್ಯಾಯ, ಇವರಿಗೊಂದು ನ್ಯಾಯ.
ಆ ವಕೀಲಿಕೆಲಿ ಇವರು ಬುದ್ದಿವಂತರಿದ್ದಾರೆ.
ಎಸಿಬಿ ರಚನೆ ಮಾಡಿ, ಇವರ ಮೇಲೆ ಬಂದ ಕೇಸ್ ಗಳನ್ನ ಮುಚ್ಚಿಹಾಕಿಕೊಂಡ್ರು.
ನಾನು ಸಿಎಂ ಆಗಿದ್ದಾಗ ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಹೋರಾಟ ಮಾಡಿದ್ದೆ.
ನನ್ನ ಮೇಲೆ ಇವರ ಸರ್ಕಾರದ 15 ಕೇಸ್ ಇತ್ತಲ್ಲ.
ನಾನು ಆವಾಗ ಇವರ ರೀತಿ ನಡೆದುಕೊಂಡನಾ.
ಇಲ್ಲ ಎರಡನೇ ಬಾರಿ ಸಿಎಂ ಆದಾಗ ನನ್ನ ಮೇಲಿನ ಕೇಸ್ ಮುಚ್ಚಿಹಾಕಿದ್ನಾ.?
ಮೆರಿಟ್ ಇದ್ರೆ ಮಾಡಿಕೊಳ್ಳಲಿ ಅಂತ ಬಿಟ್ಟಿದ್ದೀನಿ.
ಅವರಿಗೂ, ನಮಗೂ ಇರುವ ವ್ಯತ್ಯಾಸ ಅಷ್ಟೇ.
ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆ.