This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಡಿಸಿಎಂ ಡಿಕೆಶಿ ವಿರುದ್ಧದ ತನಿಖೆ ವಾಪಸ್: ಸಿಬಿಐ, ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಮುಂದಾದ ಹೈಕೋರ್ಟ್​​

ಡಿಸಿಎಂ ಡಿಕೆಶಿ ವಿರುದ್ಧದ ತನಿಖೆ ವಾಪಸ್: ಸಿಬಿಐ, ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಮುಂದಾದ ಹೈಕೋರ್ಟ್​​

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ​ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಮ್ಮತಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಮ್ಮತಿಯನ್ನು ಹಿಂಪಡೆದಿದೆ. ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಕೇಸ್ ದಾಖಲಿಸಿದ್ದ ಸಿಬಿಐ, 2013 ರಿಂದ 2018ರ ಅವಧಿಯಲ್ಲಿ ಗಳಿಸಿದ ಆದಾಯ, ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ರೂ. ಆದಾಯ ಮೀರಿ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಈ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ.ಸರ್ಕಾರದ ಸಮ್ಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿತ್ತು.

ಇಂದು ನ್ಯಾ.ಕೆ.ಸೋಮಶೇಖರ್, ನ್ಯಾ. ಉಮೇಶ್ ಎಂ.ಅಡಿಗರ ಅವರಿರುವ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಲಿದ್ದು, 2018ರಲ್ಲಿ ಡಿಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ತನಿಖೆ ಅಗತ್ಯವಿದೆ ಎಂಬ ಕಾರಣಕ್ಕೆ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಂದಿನ ಸರ್ಕಾರದ ಸಮ್ಮತಿ ಪಡೆದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ಡಿಕೆ ಶಿವಕುಮಾರ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ವಿಭಾಗೀಯ ಪೀಠ ಸಿಬಿಐ ತನಿಖೆಗೆ ಸರ್ಕಾರದ ಸಮ್ಮತಿ ನೀಡಿದ ಕ್ರಮಕ್ಕೆ ತಡೆ ನೀಡಿದೆ. ಈಗ ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕಳೆದ ವರ್ಷ ನವೆಂಬರ್​ 29 ರಂದು ನಡೆಸಿತ್ತು. ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ‌ ನೀಡಿದ ಸಮ್ಮತಿಯನ್ನು ಹಿಂಪಡೆಯಲು ಸಚಿವ ಸಂಪುಟದ ಒಪ್ಪಿಗೆ ಮೇರೆಗೆ ಹಿಂಪಡೆಯಲಾಗಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾನೂನು ಅಭಿಪ್ರಾಯ ಆಧರಿಸಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

 

Nimma Suddi
";