ವಿಜಯನಗರ : ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಕಿಡಿಗೇಡಿಗಳು ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ಘಟನೆ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹೊಸಪೇಟೆ ಡಿವೈಎಸ್ಪಿ ಶರಣಬಸವೇಶ್ವರ, ಹಂಪಿ ಪ್ರವಾಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರಕರಣ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಹಂಪಿ ಪ್ರವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೊಸ ಹಂಪಿಯ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಮೂರ್ತಿಯನ್ನು ವಿರೂಪಗೊಳಿಸಲಾಗಿದ್ದು, ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಒಡೆದಿರಬಹುದು ಅಥವಾ ಮಾನಸಿಕ ಅಸ್ವಸ್ಥರು ಈ ಕೃತ್ಯ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.