ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ
ನವದೆಹಲಿ
65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವಿಟ್ ಮೂಲಕ ಶುಭ ಕೋರಿದ್ದಾರೆ.
65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಾಡಿನ ಜನತೆಗೆ ಶುಭ ಕೋರಿರುವ ಪ್ರಧಾನಿ ಮೋದಿ, ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.
‘ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’. ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.