ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ದಯನೀಯವಾಗಿದ್ದು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗ್ತಿಲ್ಲ. ಅಷ್ಟೇ ಅಲ್ಲ, ಸಚಿವರು ಕೂಡಾ ಸ್ಪರ್ಧೆಗೆ ಸಿದ್ದರಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಕೈತಪ್ಪಿದ ಬಿಜೆಪಿ ಸಂಸದರು ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ, ಕಾಂಗ್ರೆಸ್ ಗೆ ಇಂತಹ ಕೆಟ್ಟ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿದೆ ಎಂದರು.
ಟಿಕೆಟ್ ಗೊಂದಲ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಣ್ಣ ಪುಟ್ಟ ವ್ಯತ್ಯಾಸ ಇರುತ್ತದೆ. ಆದರೆ ನಮ್ಮ ಅಭ್ಯರ್ಥಿ ಗೆಲ್ಲಿಸುವ ಮೂಲಕ ಉತ್ತರ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಪುತ್ರ ಕಾಂತೇಶ್ ಅವರಿಗೆ ಹಾವೇರಿ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಪಕ್ಷದ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಜೊತೆ ಹಿರಿಯರು ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ. 28 ಕ್ಷೇತ್ರ ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲದಕ್ಕೂ ಲೋಕಸಭಾ ಚುನಾವಣೆಯ ಫಲಿತಾಂಶ ಉತ್ತರ ಸಿಗಲಿದೆ ಎಂದರು.
ಟಿಕೆಟ್ ಸಿಗದವರಿಗೆ ಗೆಲ್ಲುವ ಸಾಮರ್ಥ್ಯ ಇಲ್ಲವೇ ಎಂಬ ಪ್ರಶ್ನೆಗೆ, ಸಾಮರ್ಥ್ಯ ಇಲ್ಲ ಅಂದಲ್ಲ, ಪಕ್ಷಕ್ಕೆ ಅವರದ್ದೇ ಆದ ಕೊಡುಗೆ ಇದ್ದು, ಆದರೆ ಕೆಲವು ಸಂದರ್ಭಗಳಲ್ಲಿ ವರಿಷ್ಠರು ತೀರ್ಮಾನ ಮಾಡ್ತಾರೆ.ಜಗದೀಶ್ ಶೆಟ್ಟರ್ ಕುರಿತಾದ ಗೊಂದಲಕ್ಕೆ ಮೂರು ನಾಲ್ಕು ದಿನಗಳಲ್ಲಿ ಉತ್ತರ ಸಿಗಲಿದೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಿರುವ ಶೋಭಾ ಕರಂದ್ಲಾಜೆ ಅವರನ್ನು ಗೆಲ್ಲಿಸುತ್ತೇವೆ ಎಂದು ವಿವರಿಸಿದರು.