ನವದೆಹಲಿ : ಇದು ಚುನಾವಣಾ ನಿಯಂತ್ರಣ ಪ್ರಾಧಿಕಾರವಲ್ಲ. ಜೊತೆಗೆ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇವಿಎಂ ಮತ್ತು ವಿವಿಪ್ಯಾಟ್ ಸ್ಲಿಪ್‌ಗಳ ಸಂಪೂರ್ಣ ಪರಿಶೀಲನೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಸುಪ್ರೀಂ ಕೋರ್ಟ್‌ನ ಪೀಠವು ಕೇವಲ ಅನುಮಾನದ ಮೇಲೆ ಕಾರ ಪೀಠವು ಕೇವಲ ಅನುಮಾನದ ಮೇಲೆ ನಾವು ಕ್ರಮ ತೆಗೆದುಕೊಳ್ಳಬೇಕೇ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪರವಾಗಿ ವಾದಿಸಿದ್ದ ವಕೀಲ ಪ್ರಶಾಂತ್ ಭೂಷಣ್ ಅವರು ವ್ಯಕ್ತಪಡಿಸಿದ್ದ ಕಳವಳಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ನೀವು ಆಲೋಚನಾ ಪ್ರಕ್ರಿಯೆಗೆ ಮುಂದಾಗಿದ್ದರೆ, ನಾವು ನಿಮಗೆ ಸಹಾಯ ಮಾಡಲು ಸಾಧ್ಯವಿಲ್ಲ. ಜೊತೆಗೆ ನಿಮ್ಮ ಚಿಂತನೆಯ ಪ್ರಕ್ರಿಯೆಯನ್ನು ಬದಲಾಯಿಸಲು ನಾವು ಇಲ್ಲಿಲ್ಲ ಎಂದಿದ್ದಾರೆ.
ಇವಿಎಂ ಮತದಾನ ವ್ಯವಸ್ಥೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಆತಂಕದ ನಡುವೆ, ವಿವಿಪ್ಯಾಟ್ ಸ್ಲಿಪ್‌ಗಳನ್ನು ಇವಿಎಂಗಳಳ್ಲಿ ಚಲಾವಣೆಯಾದ ಪ್ರತಿಯೊಂದು ಮತವನ್ನು ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸುಮಾರು ನೂರಕ್ಕೂ ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಕೋರಿದ್ದು, ಸದ್ಯ, ಪ್ರತಿ ಅಸೆಂಬ್ಲಿ ಕ್ಷೇತ್ರದಲ್ಲಿ ರ‍್ಯಾಂಡಮ್ ಆಗಿ ಆಯ್ಕೆಯಾದ ಐದು ಇವಿಎಂ ಮತ್ತು ವಿವಿಪ್ಯಾಟ್ ಸ್ಲಿಪ್‌ಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಈ ಹಿಂದಿನ ವಿಚಾರಣೆಗಳಲ್ಲಿ ಅರ್ಜಿದಾರರು ಸಾರ್ವಜನಿಕ ನಂಬಿಕೆಯ ವಿಷಯವನ್ನು ಪ್ರಸ್ತಾಪಿಸಿದ್ದರು. ಜೊತೆಗೆ ಇವಿಎಂನಿಂದ ಬ್ಯಾಲೆಟ್ ಮತದಾನ ವ್ಯವಸ್ಥೆಗೆ ಹಿಂತಿರುಗಿದ ಯುರೋಪಿಯನ್ ರಾಷ್ಟ್ರಗಳ ಉದಾಹರಣೆಯನ್ನು ಕೂಡ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್, ಭಾರತದಲ್ಲಿನ ಪರಿಸ್ಥಿತಿಯೇ ಬೇರೆ, ವಿದೇಶದ ವ್ಯವಸ್ಥೆಯನ್ನು ಭಾರತದೊಂದಿಗೆ ಹೋಲಿಕೆ ಮಾಡಬೇಡಿ ಎಂದು ಹೇಳಿತ್ತು. ಅದಲ್ಲದೇ ಇವಿಎಂ ಮತದಾನ ಪದ್ಧತಿಯು ಯಾವುದೇ ತಪ್ಪಿಲ್ಲದೇ ನಡೆಯುವುದಾಗಿದೆ ಎಂದು ಚುನಾವಣಾ ಆಯೋಗ ಒತ್ತಿ ಹೇಳಿದೆ ಎಂದು ಮಾಹಿತಿ ತಿಳಿದು ಬಂದಿದೆ.