ಗ್ರಾಮೀಣಾಭಿವೃದ್ಧಿಗೂ ಹೆಚ್ಚಿನ ಕಾಳಜಿ
ನಿಮ್ಮ ಸುದ್ದಿ ಬಾಗಲಕೋಟೆ
ನಗರ ಪ್ರದೇಶದ ಜತೆಗೆ ಗ್ರಾಮೀಣ ಪ್ರದೇಶದ ಅಭಿವೃದ್ದಿಗೂ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ಬಾಗಲಕೋಟೆ ಮತಕ್ಷೇತ್ರದ ಸುರಳಿಕಲ್ ಗ್ರಾಮದಲ್ಲಿ ಬುಧವಾರ ೯೬ ಲಕ್ಷ ರೂ. ವೆಚ್ಚದಲ್ಲಿ ೮ ಕಿ.ಮೀ. ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಂಗನವಾಡಿ ಕಟ್ಟಡ ನಿರ್ಮಾಣ, ಸಮುದಾಯ ಭವನ ಹಾಗೂ ರಸ್ತೆ ಸುಧಾರಣೆ ಸೇರಿದಂತೆ ೧ ಕೋಟಿ ೪೭ ಲಕ್ಷ ರೂ. ಮೊತ್ತದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದ್ದು ಶೀಘ್ರದಲ್ಲೇ ಇವೆಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಕೆಲವೊಂದು ಗ್ರಾಮಗಳಿಂದ ನಗರದ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ. ಇತ್ತೀಚಿಗೆ ಸುರಿದ ಮಳೆಯಿಂದ ರಸ್ತೆಗಳು ಹೆಚ್ಚು ಹಾನಿಯಾಗಿದೆ. ಇವೆಲ್ಲವನ್ನು ಅಕಾರಿಗಳಿಂದ ಸಮೀಕ್ಷೆ ಮಾಡಿಸಿದ್ದು ಹಂತ ಹಂತವಾಗಿ ಎಲ್ಲ ರಸ್ತೆಗಳ ಸುಧಾರಣೆ ಕಾಮಗಾರಿ ನಡೆಯಲಿದೆ ಎಂದು ಹೇಳಿದರು.
ಸುರಳಿಕಲ್ ಗ್ರಾಮದಲ್ಲಿ ೧೭ ಲಕ್ಷ ಮೊತ್ತದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ೫ ಲಕ್ಷದಲ್ಲಿ ಲಕ್ಷಿö್ಮÃ ದೇವಿಗುಡಿ ಹತ್ತಿರ ಸಮುದಾಯ ಭವನ ನಿರ್ಮಾಣ, ಕಡಿವಾಲ ಕಲ್ಲಾಪೂರ ಗ್ರಾಮದಲ್ಲಿ ರೂ.೧೭ ಲಕ್ಷದಲ್ಲಿ ಅಂಗನವಾಡಿ ಕಟ್ಟಡ, ಮುಗಳೊಳ್ಳಿ ಎಲ್‌ಟಿಯಲ್ಲಿ ೧೨ ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೧ ಹೆಚ್ಚುವರಿ ಕೊಠಡಿ, ಸಂಗೋAದಿ ಗ್ರಾಮದಲ್ಲಿ ೯೬ ಲಕ್ಷ ರೂ. ವೆಚ್ಚದಲ್ಲಿ ೮ ಕಿ.ಮೀ ರಸ್ತೆ ಸುಧಾರಣೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
ರಸ್ತೆ ಸುಧಾರಣಾ ಕಾಮಗಾರಿ, ಅಂಗನವಾಡಿ ಕಟ್ಟಡ ನಿರ್ಮಾಣ ಹಾಗು ಶಾಲಾ ಕೊಠಡಿ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗಳಿಗೆ ಗುಣಮಟ್ಟದ ಸಾಮಗ್ರಿ ಬಳಸಬೇಕು. ನಿಗತ ಅವಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಬೇಕು. ಬೇಕಾಬಿಟ್ಟಿ ಕಾಮಗಾರಿ ನಡೆದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದರು.