ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನುಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಗ್ರಾಮದ ಆರಾಧ್ಯ ದೈವ ಶ್ರೀ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಹಸುವನ್ನು ಬಿಡಲಾಗಿದ್ದು, ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಹಸುವಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು.
ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಗ್ರಾಮಸ್ಥರೆಲ್ಲ ಸೇರಿ ಟ್ರ್ಯಾಕ್ಟರ್ ನಲ್ಲಿ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಗ್ರಾಮದ ಹಳೆಯ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದು, ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ ಎಂದು ಮಾಹಿತಿ ಕಂಡು ಬಂದಿದೆ.