This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು, ಹನುಮ ಧ್ವಜ ತೆರವುಗೊಳಿಸಲು ಬಂದಿದ್ದ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು, ಹನುಮ ಧ್ವಜ ತೆರವುಗೊಳಿಸಲು ಬಂದಿದ್ದ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮಂಡ್ಯ: ಇಲ್ಲಿನ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದು, ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಗ್ರಾಮಸ್ಥರು ಗ್ರಾಮದಲ್ಲಿ 108 ಅಡಿ ಧ್ವಜಸ್ಥಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದು, ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧ್ವಜ ಹಾರಾಟದ ಬಗ್ಗೆ ಗ್ರಾಮ ಪಂಚಾಯತ್​ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು.

ಸರ್ಕಾರಿ ಜಾಗದಲ್ಲಿ ಧ್ವಜಸ್ಥಂಭ ನೆಡಲಾಗಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಧ್ವಜಸ್ಥಂಭ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಗ್ರಾಮಕ್ಕೆ ಆಗಮಿಸಿದ್ದು, ಈ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದ್ದು, ಹಿಂದೆ ಕಾಂಗ್ರೆಸ್ ಶಾಸಕ, ಸಚಿವರ ಷಡ್ಯಂತ್ರ ಇದೆ ಎಂದು ಆರೋಪ ಮಾಡಿದರು. ರಾಮ ಮಂದಿರ ಉದ್ಘಾಟನೆ ಬಳಿಕ ಕಾಂಗ್ರೆಸ್ಸಿಗರಿಗೆ ಕೇಸರಿ ಕಂಡರೆ ಆಗುತ್ತಿಲ್ಲ. ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಹನುಮ ಧ್ವಜ ಇಳಿಸಲು ಮುಂದಾಗಿದ್ದಾರೆ ಎಂದು ಆಕ್ರೋಶಗೊಂಡರು.

";