This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National NewsPolitics NewsState News

ಪ್ರಜ್ವಲ್‌ ರೇವಣ್ಣ ಅಂಥವರನ್ನು ಕ್ಷಮಿಸುವ ಪ್ರಶ್ನೆಯೇ ಉದ್ಭವಿಸಲ್ಲ- ಪ್ರಧಾನಿ ಮೋದಿ

ಪ್ರಜ್ವಲ್‌ ರೇವಣ್ಣ ಅಂಥವರನ್ನು ಕ್ಷಮಿಸುವ ಪ್ರಶ್ನೆಯೇ ಉದ್ಭವಿಸಲ್ಲ- ಪ್ರಧಾನಿ ಮೋದಿ

ನವದೆಹಲಿ: ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ,” ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದರು.

ಸುದ್ದಿಸಂಸ್ಥೆ ‘ಟೈಮ್ಸ್‌ ನೌ’ಗೆ ನೀಡಿದ ಸಂದರ್ಶನದಲ್ಲಿ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮಾತನಾಡಿರುವ ಮೋದಿ ಅವರು, ” ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತುಕೊಂಡಿದೆ. ರಾಜಕೀಯ ಲಾಭ ಪಡೆದುಕೊಳ್ಳಲು ಆರೋಪಿ ದೇಶ ಬಿಟ್ಟು ಹೋಗುವವರೆಗೂ ಸುಮ್ಮನಿದ್ದು, ವ್ಯರ್ಥ ಕಾಲಹರಣ ಮಾಡಿದೆ,” ಎಂದು ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಜ್ವಲ್‌ ಅವರನ್ನು ವಾಪಸ್‌ ಕರೆ ತರಬೇಕು. ಕಠಿಣ ಕ್ರಮ ಕೈಗೊಳ್ಳಲೇಬೇಕು. ಇಲ್ಲಿಅವರನ್ನು ಕ್ಷಮಿಸುವ ಪ್ರಶ್ನೆಯೇ ಉದ್ಭವಿಸಲ್ಲ,” ಎಂದು ಮೋದಿ ಹೇಳಿದರು.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಡಿ ಬಂಧಿತರಾಗಿರುವ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಅವರು ಈಗ ನಿಯಮಿತ (ರೆಗ್ಯುಲರ್‌) ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಕೋರ್ಟ್‌ ವಿಚಾರಣೆ ಮಂಗಳವಾರಕ್ಕೆ ಮುಂದೂಡಿದೆ ಎಂದರು.

ತಮ್ಮ ಮಗ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಮೈಸೂರಿನ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

”ಜೆಡಿಎಸ್‌ ಜತೆ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ನಡೆಸುತ್ತಿದ್ದ ವೇಳೆಯೇ ಇಂಥ ಕೃತ್ಯಗಳು ನಡೆದಿವೆ. ಕ್ರಮ ಜರುಗಿಸದೆ ಸುಮ್ಮನಿದ್ದ ಸರ್ಕಾರ, ಚುನಾವಣೆ ಸಮಯದಲ್ಲಿ ಒಕ್ಕಲಿಗರ ಮತಗಳ ಮೇಲೆ ಕಣ್ಣಿಟ್ಟು ಮತದಾನದ ಸಮಯದಲ್ಲಿ ವಿಡಿಯೋ ಬಿಡುಗಡೆ ಮಾಡಲಾಗಿದೆ. ವಿಡಿಯೋ ಪ್ರಕರಣದಲ್ಲಿ ಎಲ್ಲವೂ ಸಂಶಯಕ್ಕೆ ದಾರಿ ಮಾಡಿಕೊಟ್ಟಿದೆ” ಎಂದು ಮೋದಿ ಆರೋಪಿಸಿದರು.

” ಆರೋಪಿತ ವ್ಯಕ್ತಿ ದೇಶ ಬಿಟ್ಟು ಹೋದ ಮೇಲೆ ವಿಡಿಯೋ ಬಿಡುಗಡೆ ಮಾಡಲಾಗಿದೆ. ಆತ ವಿದೇಶಕ್ಕೆ ಹೋಗುವ ಮಾಹಿತಿ ಇದ್ದರೂ ಮೌನವಾಗಿದ್ದ ಸರ್ಕಾರ ಬಳಿಕ ಕೇಂದ್ರದ ಕಡೆ ಬೊಟ್ಟು ಮಾಡಿದೆ. ರಾಜ್ಯ ಸರ್ಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು ಮತ್ತು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಇಡಬೇಕಿತ್ತು ” ಎಂದು ಮೋದಿ ದೂರಿದರು.

Nimma Suddi
";