ನವದೆಹಲಿ: ಕಾಂಗ್ರೆಸ್ನ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾದರೆ ಒಂದು ಷರತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳ್ಳದ ಹೊರತು ತಾನು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಸೀಟುಗಳ ಸಂಖ್ಯೆ ಮತ್ತು ಸ್ಥಾನಗಳ ಹೆಸರುಗಳನ್ನು ಈಗಾಗಲೇ ನಿರ್ಧರಿಸಲಾಗಿದೆ, ಆದರೆ ರಾಹುಲ್ ಗಾಂಧಿ ಕೆಲವು ಸ್ಥಾನಗಳಲ್ಲಿ ಅಚಲವಾಗಿದ್ದು, ಮೈತ್ರಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಮಾತುಕತೆ ನಡೆದಿದ್ದು, ಸೀಟುಗಳ ಬಗ್ಗೆ ಇನ್ನೂ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಲೋಕಸಭೆ ಚುನಾವಣೆಗೂ ಮುನ್ನ ಅಮೇಥಿಯಲ್ಲಿ ಮತ್ತೆ ರಾಜಕೀಯ ಬಿಸಿ ಏರುತ್ತಿದೆ. ಒಂದೆಡೆ ಇಂದು ಅಮೇಥಿ ಮಾಜಿ ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯೊಂದಿಗೆ ಬಹಳ ದಿನಗಳ ನಂತರ ಅಮೇಥಿಗೆ ಬರುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸಚಿವೆ ಹಾಗೂ ಸಂಸದೆ ಸ್ಮೃತಿ ಇರಾನಿ ಕೂಡ ತಮ್ಮ ಸಂಸದೀಯ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.