AFMS Recruitment 2023: ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು (Armed Forces Medical Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 650 ಮೆಡಿಕಲ್ ಆಫೀಸರ್ (Medical Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 5, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು
ಹುದ್ದೆ ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ 650
ವಿದ್ಯಾರ್ಹತೆ ಎಂಬಿಬಿಎಸ್
ವೇತನ ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 5, 2023 (ನಾಳೆ)
ವಿದ್ಯಾರ್ಹತೆ:
ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್ ಪೂರ್ಣಗೊಳಿಸಿರಬೇಕು.