ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಶಶಿಕುಮಾರ್, ಲೋಕಿ ಸೇರಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೃತ ದುರ್ವೈವಿಗಳು ಅಂಧ್ರಪ್ರದೇಶದ ಚಿತ್ತೂರು ಮೂಲದವರು ಎನ್ನಲಾಗಿದೆ.
ಮೂವರು 25 ರ ವಯಸ್ಸಿನ ಯುವಕರಾಗಿದ್ದು, ಇಂದು (ಏಪ್ರಿಲ್ 25) ಸಾರ್ವಜನಿಕರು ನೋಡಿ ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
25 ವರ್ಷದ ಆಸುಪಾಸಿನಮೂವರು ಯುವಕರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಅಥವಾ ಹಳಿ ದಾಟುವಾಗ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರಾ ಎನ್ನುವುದನ್ನು ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.