ಬ್ಯಾಂಕಿಂಗ್ ವಲಯದಲ್ಲಿ ಕೆಲಸಕ್ಕೆ ಸೇರಿಕೊಳ್ಳುವ ಉತ್ಸಾಹ ಹೊಂದಿರುವ ಯುವಕ/ಯುವತಿಯರಿಗೆ ಇಲ್ಲಿದೆ ಹೊಸ ಅವಕಾಶ. ಸಿಬ್ಬಂದಿ ನೇಮಕಾತಿ ಸಂಸ್ಥೆ (ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್- ಐಬಿಪಿಎಸ್) ಸ್ಪೆಶಲಿಸ್ಟ್ ಅಧಿಕಾರಿಗಳ (special officers) ನೇಮಕಾತಿ (Banking Jobs) ಪ್ರಕ್ರಿಯೆಗೆ (ಸಿಆರ್‌ಪಿ) ಅರ್ಜಿ ಆಹ್ವಾನಿಸಿದೆ. ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳು (nationalized banks) ಇದರಲ್ಲಿ ಪಾಲ್ಗೊಳ್ಳುತ್ತಿವೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 28 ಕೊನೆಯ ದಿನವಾದ ಕಾರಣ ಅಭ್ಯರ್ಥಿಗಳು ತುರ್ತಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ.
ಯಾವ್ಯಾವ ಹುದ್ದೆಗಳು? (ಸ್ಕೇಲ್-1)
⮚ ಐಟಿ ಆಫೀಸರ್ -120
⮚ ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್ -500
⮚ ರಾಜ್‌ಭಾಷಾ ಅಧಿಕಾರಿ -41
⮚ ಲಾ ಆಫೀಸರ್ -10
⮚ ಎಚ್ಆರ್/ಪರ್ಸನಲ್ ಆಫೀಸರ್ – 31
⮚ ಮಾರ್ಕೆಟಿಂಗ್ ಆಫೀಸರ್ -700
ಯಾವ್ಯಾವ ಬ್ಯಾಂಕ್‌ಗಳಲ್ಲಿ ಹುದ್ದೆ?
● ಬ್ಯಾಂಕ್ ಆಫ್ ಇಂಡಿಯಾ
● ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
● ಇಂಡಿಯನ್ ಒವರ್‌ಸೀಸ್ ಬ್ಯಾಂಕ್
● ಪಂಜಾಬ್ ನ್ಯಾಷನಲ್ ಬ್ಯಾಂಕ್
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: 850 ರೂ. (GSTಯೂ ಸೇರಿ)
ಪ.ಜಾ, ಪ.ಪಂ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ 175 ರೂ. (GSTಯೂ ಸೇರಿ)
ಶುಲ್ಕ ಪಾವತಿ
ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ಆನ್ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ವಿಧಾನ
ಆನ್‌ಲೈನ್‌ನಲ್ಲಿ ಮಾತ್ರ.
ಪ್ರಮುಖ ದಿನಾಂಕಗಳು:
ಆಗಸ್ಟ್ 1ರಿಂದ ಆಗಸ್ಟ್ 28, 2023ರವರೆಗೆ (ಇದಕ್ಕೂ ಮೊದಲು ಅರ್ಜಿ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನವಾಗಿತ್ತು. ಬಳಿಕ ಇದನ್ನು ಆಗಸ್ಟ್ 28ಕ್ಕೆ ವಿಸ್ತರಿಸಲಾಗಿದೆ)
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?
ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್):
ಬೆಂಗಳೂರು, ಬೆಳಗಾವಿ, ಬೀದರ್, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.
ಮುಖ್ಯ ಪರೀಕ್ಷೆ:
ಬೆಂಗಳೂರು ಮತ್ತು ಹುಬ್ಬಳ್ಳಿ- ಧಾರವಾಡ
ವಯೋಮಿತಿ:
01.08.2023ಕ್ಕೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1993ಕ್ಕಿಂತ ಮುಂಚಿತವಾಗಿ ಮತ್ತು 01.08.2003ರ ನಂತರ ಜನಿಸಿರಬಾರದು. (ಎರಡೂ ದಿನಗಳು ಸೇರಿದಂತೆ)
ವಯೋಮಿತಿ ಸಡಿಲಿಕೆ:
ಸರಕಾರದ ನಿಯಮಾನುಸಾರ ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು, ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು, ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು.
ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್ಲೈನ್ ಪೂರ್ವಭಾವಿ ಪರೀಕ್ಷೆ – ಡಿಸೆಂಬರ್ 30/ 31, 2023ರಂದು.
ಎರಡನೇ ಹಂತ: ಆನ್ಲೈನ್ ಮುಖ್ಯ ಪರೀಕ್ಷೆ- ಜನವರಿ 28, 2024.
ಮೂರನೇ ಹಂತ: ಸಂದರ್ಶನ
ಫೆಬ್ರವರಿ- ಮಾರ್ಚ್ 2024.
ಪ್ರಾತಿನಿಧಿಕ ಹಂಚಿಕೆ: ಏಪ್ರಿಲ್ 2024
ನೇಮಕಾತಿ ಹೇಗೆ?
ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ, ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರಲಿದೆ.
ಆನ್ಲೈನ್‌ನಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು. ಅವರು ಮುಖ್ಯ ಪರೀಕ್ಷೆಗೆ ಹಾಜರಾಗಬೇಕು, ನಂತರ ಅಲ್ಲಿ ಪಡೆದ ಅಂಕೆಗಳ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ತಪ್ಪು ಉತ್ತರಗಳಿಗೆ ಋಣಾತ್ಮಕ ಮೌಲ್ಯಮಾಪನವಿದೆ. ಪರೀಕ್ಷೆಗಳು ಇಂಗ್ಲಿಷ್/ ಹಿಂದಿ ಭಾಷೆಯಲ್ಲಿರಲಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಒಬ್ಬ ಅಭ್ಯರ್ಥಿ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ.
ಶೈಕ್ಷಣಿಕ ಅರ್ಹತೆಗಳೇನು?
ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
1) ಐಟಿ ಆಫೀಸರ್ ಹುದ್ದೆಗೆ: ಅರ್ಜಿ ಸಲ್ಲಿಸುವವರು ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಎಲೆಕ್ಟ್ರಾನಿಕ್ಸ್/ /ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ ಸ್ಟ್ರುಮೆಂಟೇಷನ್‌ನಲ್ಲಿ ನಾಲ್ಕು ವರ್ಷಗಳ ಎಂಜಿನಿಯರಿಂಗ್ ಅಥವಾ ಟೆಕ್ನಾಲಜಿ ಪದವಿ ಅಥವಾ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್/ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್ಸ್ಟುಮೆಂಟೇಶನ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅಥವಾ ಪದವಿ ಜೊತೆಯಲ್ಲಿ DOEACC “B” ಲೆವೆಲ್ ಪಾಸಾಗಿರಬೇಕು.
2) ಅಗ್ರಿಕಲ್ಚರಲ್ ಫೀಲ್ಡ್ ಆಫೀಸರ್: ಕೃಷಿ/ತೋಟಗಾರಿಕೆ / ಪಶುಸಂಗೋಪನೆ/ ಪಶು ವೈದ್ಯಕೀಯ ವಿಜ್ಞಾನ/ ಡೇರಿ ಸೈನ್ಸ್/ ಅಗ್ರಿಎಂಜಿನಿಯರಿಂಗ್ ಮೀನುಗಾರಿಕೆ ವಿಜ್ಞಾನ/ ಮೀನು ಸಾಕಣೆ, ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಕೃಷಿ/ ಮೀನುಗಾರಿಕೆ ಇಂಜಿನಿಯರಿಂಗ್ ನಾಲ್ಕು ವರ್ಷಗಳ ಪದವಿ ಪಡೆದಿರಬೇಕು.
3) ಲಾ ಆಫೀಸರ್ ಹುದ್ದೆಗೆ: ಎಲ್‌ಎಲ್‌ಬಿ ಪದವಿ ಪಡೆದಿರಬೇಕು ಮತ್ತು ಬಾರ್ ಕೌನ್ಸಿಲ್‌ನ ಸದಸ್ಯತ್ವ ಪಡೆದಿರಬೇಕು.
4) ರಾಜ್ಯ ಭಾಷಾ ಅಧಿಕಾರಿ ಹುದ್ದೆಗೆ: ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ – ಪದವಿಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ ಪದವಿಯಲ್ಲಿ ಇಂಗ್ಲಿಷ್ ಮತ್ತು ಹಿಂದಿಯನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು.
5) ಎಚ್‌ಆರ್/ ಪರ್ಸನಲ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಪರ್ಸನಲ್ ಮ್ಯಾನೇಜ್ಮೆಂಟ್/ಇಂಡಸ್ಟ್ರಿಯಲ್ ರಿಲೇಷನ್ಸ್ ಎಚ್ಆರ್/ ಎಚ್ಆರ್ಡಿ/ ಸೋಷಿಯಲ್ ವರ್ಕ್/ ಕಾರ್ಮಿಕ ಕಾನೂನು ಇದ್ಯಾವುದಾದರೂ ವಿಷಯದಲ್ಲಿ ಪೂರ್ಣಾವಧಿಯ ಸ್ನಾತಕೋತ್ತರ ಪದವಿ ಅಥವಾ ಪೂರ್ಣಾವಧಿಯ ಸ್ನಾತಕೋತ್ತರ ಅಥವಾ ಡಿಪ್ಲೊಮಾ ಮಾಡಿರಬೇಕು.
6) ಮಾರ್ಕೆಟಿಂಗ್ ಆಫೀಸರ್: ಪದವೀಧರರಾಗಿರಬೇಕು ಮತ್ತು ಎರಡು ವರ್ಷಗಳ ಪೂರ್ಣಾವಧಿ ಎಂಎಂಎಸ್ (ಮಾರ್ಕೆಟಿಂಗ್) ಎಂಬಿಎ (ಮಾರ್ಕೆಟಿಂಗ್)/ PGDBA /PGDBM/PGPM/PGDM ಮಾರ್ಕೆಟಿಂಗ್‌ನಲ್ಲಿ ಸ್ಪೆಶಲೈಜನೇಶನ್ ಮಾಡಿರಬೇಕು. ಎರಡು ವಿಷಯಗಳ ಸ್ಪೆಶಲೈಜನೇಶನ್ ಸಂದರ್ಭದಲ್ಲಿ, ಒಂದು ವಿಷಯ ಮೇಲೆ ಸೂಚಿಸಿದ ಕ್ಷೇತ್ರದಲ್ಲಿರಬೇಕು. ಮೇಜರ್/ಮೈನರ್ ವಿಶೇಷತೆಗಳ ಸಂದರ್ಭದಲ್ಲಿ, ಮೇಜರ್ ವಿಷಯ ಸೂಚಿಸಲಾದ ಸ್ಟ್ರೀಮ್‌ನಲ್ಲಿರಬೇಕು. ಎರಡಕ್ಕಿಂತ ಹೆಚ್ಚು ಸ್ಪೆಶಲೈಜನೇಶನ್‌ನಲ್ಲಿ ಪಿಜಿ ಪದವಿ (ಎಂಎಂಎಸ್ ಅಥವಾ ಎಂಬಿಎ)/ಪಿಜಿ ಡಿಪ್ಲೊಮಾ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅರ್ಜಿ ಸಲ್ಲಿಸಲು ವೆಬ್ ಲಿಂಕ್: https://ibpsonline.ibps.in/crpsp13jun23/ ಹಾಗೂ ಅಧಿಸೂಚನೆಗೆ: https://www.ibps.in/