This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Education NewsLocal NewsState News

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ

ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ

ಬಾಗಲಕೋಟೆ

ಕುಷ್ಠರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ ೩೦ ರಿಂದ ಫೆಬ್ರವರಿ ೧೩ ವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಬಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವದನ್ನು ತಡೆಗಟ್ಟಬಹುದಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕಳಂಕವನ್ನು ಕೊನೆಗೊಳಿಸಿ, ಘನತೆಯನ್ನು ಎತ್ತಿ ಹಿಡಿಯಿತಿ ಎಂಬ ಘೋಷವ್ಯಾಕ್ಯದೊಂದಿಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕುಷ್ಠರೋಗ ತಡೆಗಟ್ಟುವಲ್ಲಿ ಪಂಚಾಯತ್ ರಾಜ್, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಾರ್ತಾ ಇಲಾಖೆಯ ಸಹಕಾರ ಹಾಗೂ ಜವಾಬ್ದಾರಿ ಅಗತ್ಯವಾಗಿದೆ. ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಲು ಡಂಗೂರು, ಮೈಕಿಂಗ್, ಧ್ವನಿವರ್ದಕಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಧ್ವನಿವರ್ಧಕದಲ್ಲಿ ಪ್ರಚಾರ ಮಾಡಬೇಕು. ಸರಕಾರಿ, ಖಾಸಗಿ ಕಚೇರಿ, ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಅಭಿಯಾನದಲ್ಲಿ ಸಹಕಾರ ನೀಡಲು ತಿಳಿಸಿಸದರು.

ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ, ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ತಾಯಂದಿರ ಸಭೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಿರಂತರವಾಗಿ ಜಾಗೃತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಕುಷ್ಠರೋಗ ಹರಡುವಿಕೆ ಪ್ರಮಾಣ ಶೇ.೦.೧೮ ಇದ್ದು, ಇದನ್ನು ಸಂಪೂರ್ಣ ತಡೆಗಟ್ಟುವ ಹಾಕುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮವಹಿಸಲು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲಣಾಧಿಕಾರಿ ಡಾ.ಶಿವನಗೌಡ ಪಾಟೀಲ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಕುಷ್ಠರೋಗ ಜಾಗೃತಿ ಅಭಿಯಾನದ ಪ್ರಚಾರದ ಪೋಸ್ಟರ, ಜಾಗೃತಿಯ ಫಲಕಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಮಲೇರಿಯಾ ನಿರ್ಮೂಲಣಾ ಅಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಗ್ಯಾನಪ್ಪ ದಾಸರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಸಿನ್ನೂರ, ಜಿಲ್ಲಾ ಕುಷ್ಠರೋಗ ಸಂಘದ ಅಧಿಕಾರಿ ನಾಗಪ್ಪ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

";