This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Education NewsLocal NewsNational NewsState NewsTechnology News

ನಗದು ರಹಿತ ವ್ಯವಸ್ಥೆಗೆ ಸಾರಿಗೆ ಸಂಸ್ಥೆ ಮುನ್ನುಡಿ ಇನ್ನು ಮುಂದೆ ಬಸ್ ನಲ್ಲೂ ಯುಪಿಐ ಪಾವತಿ ವ್ಯವಸ್ಥೆ

ಹುಬ್ಬಳ್ಳಿ

ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ.

ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ರವರ ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.

ನಗರದ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಯಪಿಐ ವ್ಯವಸ್ಥೆಗೆ ಚಾಲನೆ ನೀಡಿದರು.

ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಗಲು ರಹಿತ ವ್ಯವಹಾರವನ್ನು ಉತ್ತೇಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಟಿಕೆಟ್ ಪಡೆಯಲು ನಗರವನ್ನು ನಗದು ರಹಿತ ಹಣ ಪಾವತಿ ವ್ಯವಸ್ಥೆಯನ್ನು ಆರಂಭಿಸಲಾಗಿದೆ.

ಚಿಲ್ಲರೆ ಸಮಸ್ಯೆ ಪರಿಹಾರ, ಸಮಯದ ಉಳಿತಾಯ ಹಾಗೂ ಪ್ರಯಾಣದಲ್ಲಿ ನಗದು ತೆಗೆದು ಕೊಂಡು ಹೋಗಬೇಕಾದ ಅವಶ್ಯಕತೆ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,830 ಬಸ್ಸುಗಳಿದ್ದು 4,359 ಅನುಸೂಚಿಗಳ ಮೂಲಕ ಪ್ರತಿದಿನ 15 ಲಕ್ಷ ಕಿಲೋಮೀಟರ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ.

ಆರಂಭದಲ್ಲಿ ಪ್ರಾಯೋಗಿಕವಾಗಿ ಹುಬ್ಬಳ್ಳಿ ಗ್ರಾಮಾಂತರ 3ನೇ ಡಿಪೋ ಬಸ್ಸುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.ಇದರ ಸಾಧಕ-ಬಾಧಕಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಇತರೆ ಬಸ್ಸುಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಮುಖ್ಯಸ್ಥ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ.

ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಶಶಿಧರ ಕುಂಬಾರ, ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ಎಲ್.ಶ್ರೀನಾಥ ಮತ್ತಿತರರು ಇದ್ದರು.