This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education News

ಲಿಂಗಾಯತ ಬಡ ಸಮುದಾಯಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಶಿಫಾರಸ್ಸಿಗೆ ಒತ್ತಾಯ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ ಎ ಮೀಸಲಾತಿ ನೀಡಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಆಗ್ರಹ

ನಿಮ್ಮ ಸುದ್ದಿ ಬಾಗಲಕೋಟೆ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ ಎ ಮೀಸಲಾತಿ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡಲು ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಪಾಲ ವಾಜುಭಾಯಿ ವಾಲಾ ಅವರನ್ನು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಆಗ್ರಹಿಸಿದೆ.

ಪಂಚಮಸಾಲಿ ಸಮಾಜದ ಮುಖಂಡರು, ಬಾಂಧವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಿ ಒತ್ತಾಯಿಸಿದರು.

ರಾಜ್ಯದಲ್ಲಿ ಕೃಷಿಯನ್ನೇ ಕುಲ ಕಸುಬನ್ನಾಗಿಸಿಕೊಂಡು, ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ತೀರ ಹಿಂದುಳಿದಿದ್ದು, ಇದಕ್ಕಾಗಿ ಸಮಾಜಕ್ಕೆ ಎ೨ ಮೀಸಲಾತಿ ಹಾಗೂ ಕೇಂದ್ರ ಸರಕಾರದ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಕಳೆದ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಸಹ ಸ್ಪಂದಿಸದಿರುವದು ದುರದೃಷ್ಟಕರವಾಗಿದೆ ಎಂದು ಸಮಾಜದ ಮುಖಂಡರು ಅಪರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಪತ್ರದಲ್ಲಿ ತಿಳಿಸಿದ್ದಾರೆ.

ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಸಮಾಜದ ಜಗದ್ಗುರು ಪೀಠದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಸಮಾಜಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ೨ ಎ ಮೀಸಲಾತಿ ಹಾಗೂ ಕೇಂದ್ರದಲ್ಲಿ ಬಡ ಲಿಂಗಾಯತ ಸಮುದಾಯಗಳನ್ನು ಓಬಿಸಿಗೆ ಸೇರಿಸಲು ನಾಲ್ಕು ಹಂತದ ವಿವಿಧ ಹೋರಾಟಗೈದು ಈಗ ಜನೇವರಿ ೧೪ ರಿಂದ ಬೆಂಗಳೂರಿನವರೆಗೆ ೭೧೨ ಕಿ.ಮೀ. ಪಂಚಲಕ್ಷ ಹೆಜ್ಜೆಗಳ ಐತಿಹಾಸಿಕ ಬೃಹತ್ ಪಾದಯಾತ್ರೆ, ಬೃಹತ್ ಸಮಾವೇಶ ನಡೆಸಿ ಈಗ ಬೆಂಗಳೂರಿನಲ್ಲಿ ಧರಣಿ ನಡೆಸಿ ರಾಜ್ಯ ಸರಕಾರಕ್ಕೆ ಹಕ್ಕೊತ್ತಾಯ ಮಾಡಿದರೂ ಸಹ ಸ್ಪಂದಿಸಿಲ್ಲ, ಕೂಡಲೇ ರಾಜ್ಯ ಸರಕಾರಕ್ಕೆ ಈ ಕುರಿತು ಸೂಕ್ತ ನಿರ್ದೇಶನ ನೀಡಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ದೊರಕಿಸಬೇಕೆದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಧರೆಪ್ಪ ಸಾಂಗ್ಲೀಕರ ಅವರು ಈ ಸಂದರ್ಭದಲ್ಲಿ ಮಾತನಾಡಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ೨ ಎ ಮೀಸಲಾತಿ ನೀಡಬೇಕು ಹಾಗೂ ಲಿಂಗಾಯತ ಬಡ ಸಮಾಜಗಳನ್ನು ಕೇಂದ್ರ ಸರಕಾರದ ಓಬಿಸಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸ್ಸು ಮಾಡಬೇಕೆಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸಿದ್ದಣ್ಣ ಹಂಪನಗೌಡರ, ಎಸ್.ಪಿ. ದಾನಪ್ಪಗೋಳ, ತಾಲೂಕಾಧ್ಯಕ್ಷ ಎನ್.ಜಿ. ಕೋಟಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಶಿರೂರ, ತಾಲೂಕಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪರುತಗೇರಿ, ನಗರಸಭೆ ಸದಸ್ಯ ಚನ್ನವೀರ ಅಂಗಡಿ, ವೀರಣ್ಣ ಕಲಬುರ್ಗಿ, ವಿಜಯ ಮುಳ್ಳೂರ, ಸಚಿನ ಲೆಕ್ಕದ, ಪರಶುರಾಮ ಮುಳಗುಂದ, ಎಸ್.ಎನ್. ರಾಂಪೂರ, ಅಶೋಕ ಧನ್ನೂರ, ಸಿದ್ದು ಬೊಮ್ಮಸಾಗರ ಮತ್ತಿತರರು ಉಪಸ್ಥಿತರಿದ್ದರು.

Nimma Suddi
";