ವಿಜಯಪುರ: ಕಾಯಕಯೋಗಿ ಸಿದ್ಧಗಂಗಾ ಮಠದ ಹಿಂದಿನ ಪೀಠಾಧ್ಯಕ್ಷ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಪುರಸ್ಕಾರ ನೀಡಲು ಕಾಲ ಕೂಡಿ ಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಧಾನ ಮಾಡುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿ, ಹಿಂದಿನಿಂದಲೂ ಈ ಕುರಿತು ಚರ್ಚೆ ನಡೆಯುತ್ತಿದ್ದು, ಎಲ್ಲದಕ್ಕೂ ಸಮಯ ಕೂಡಿ ಬರಬೇಕು. ಮುಂಬರುವ ದಿನಗಳಲ್ಲಿ ಒಳ್ಳೆಯದಾಗುತ್ತದೆ ಎಂದರು.ಇದೇ ವೇಳೆ ರಾಜ್ಯದಲ್ಲಿ ನೂರು ರಾಮಮಂದಿರ ಪುನಶ್ಚೇಚೇತನ ಮಾಡುವ ಸರಕಾರದ ತೀರ್ಮಾನವನ್ನು ಹೇಳಿದರು.
ರಾಮನ ಅಸ್ತಿತ್ವವನ್ನು ಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ರಾಮಮಂದಿರ ಪುನಶ್ಚೇತನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದ್ದು, ಒಳ್ಳೆಯ ಕೆಲಸ ಮಾಡುತ್ತಿರುವವರಿಗೆ ನಾವು ಹಾರೈಸುತ್ತೇವೆ. ಭಗವಾನ್ ರಾಮನನ್ನು ಅವರು ಒಪ್ಪಿಕೊಂಡಿರುವುದು ತುಂಬಾ ಸಂತೋಷಕರ ಸಂಗತಿಯಾಗಿದೆ ಎಂದು ತಿಳಿಸಿದರು.
ಬೆಳಗಾವಿ ಜಿಲ್ಲೆಯ ಎಂ ಕೆ ಹುಬ್ಬಳ್ಳಿಯಲ್ಲಿ ಭಗವಾ ಧ್ವಜ ಗಲಾಟೆ ವಿಚಾರವಾಗಿ ಮಾತನಾಡಿ, ಮಂಡ್ಯದಲ್ಲಿ ಭಗವಾಧ್ವಜ ಗಲಾಟೆ ವಿಚಾರ ಕಾಂಗ್ರೆಸ್ ಸರಕಾರದ ಪಿತೂರಿಯಾಗಿದ್ದು, ಹನುಮ ಧ್ವಜ ಹಾರಿಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಧ್ವಜ ಸ್ತಂಭ ನಿರ್ಮಾಣ ಮಾಡಲಾಗಿತ್ತು ಎಂದು ವಿವರಿಸಿದರು.